Breaking News

ಪುತ್ತೂರಿನಲ್ಲಿ ಕಳೆದ ಕೆಲವು ತಿಂಗಳಿಂದ ತಾಲಿಬಾನ್‌ ಸಂಸ್ಕೃತಿ ಇದೆ: ನಳಿನ್ ಕುಮಾರ್ ಕಟೀಲ್

Spread the love

ಮಂಗಳೂರು: ಪುತ್ತೂರಿನಲ್ಲಿ ಕಳೆದ ಕೆಲವು ತಿಂಗಳಿಂದ ತಾಲಿಬಾನ್‌ ಸಂಸ್ಕೃತಿ ಇದೆ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್  ಹೇಳಿದ್ದಾರೆ.

ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ದರ್ಬೆಯಲ್ಲಿ ನಡೆದ ಗಲಾಟೆ ವಿಚಾರವಾಗಿ, ಸಣ್ಣ ವಿಚಾರ ಮುಂದಿಟ್ಟುಕೊಂಡು ಅಂಗಡಿ ಮೇಲೆ ದಾಳಿ ಮಾಡಿದ್ದಾರೆ. ಮಹಿಳೆ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಇದು ತಾಲಿಬಾನ್ ಸಂಸ್ಕೃ=ತಿ, ತಾಲಿಬಾನ್ ಸಂಸ್ಕ್ರತಿಯ ಹೋರಾಟಗಳು ಜಾಸ್ತಿಯಾಗುತ್ತಿವೆ. ರಾಜ್ಯದಲ್ಲಿ ಕಾಂಗ್ರೆಸ್  ಆಡಳಿತ ಬಂದ ಮೇಲೆ ಈ ರೀತಿಯ ಘಟನೆಗಳು ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವರಾದ ಮೇಲೆ ಇಂತಹ ಘಟನೆಗಳಿಗೆ ಬೆಂಗಾವಲಾಗಿ ನಿಂತಿದ್ದಾರೆ. ಪುತ್ತೂರಿನ ಶಾಸಕ ಹಾಗೂ ಗೃಹ ಸಚಿವರು ಘಟನೆ ಬಗ್ಗೆ ಮೌನದಲ್ಲಿದ್ದಾರೆ. ಈ ಘಟನೆಯ ಹಿಂದೆ ಯಾವ ಶಕ್ತಿಗಳು ಇವೆ ಎಂಬ ಸಂಶಯ ಇದೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.

ಅಂಗಡಿಯಲ್ಲಿ ನಡೆದ ಘಟನೆ ಬಗ್ಗೆ ಕಾನೂನು ಅಥವಾ ಪೊಲೀಸ್ ಇಲಾಖೆ ಮುಖಾಂತರ ಬಗೆಹರಿಸಬಹುದಿತ್ತು. ಅದು ಬಿಟ್ಟು ಏಕಾಏಕಿ ಅಂಗಡಿಗೆ ನುಗ್ಗಿ ಮಹಿಳೆಯರ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಇಂತಹ ಘಟನೆಗಳಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ. ಹೊರಗಿನಿಂದ ಬಂದು ಗಲಭೆ ಎಬ್ಬಿಸಿದ್ದಾರೆ. ಅವರ ಮೇಲೆ ಕಾನೂನು ಕ್ರಮ ಕೈಗೊಂಡಿಲ್ಲ ಎಂದು ಕಿಡಿಕಾರಿದ್ದಾರೆ.

ಯಾರು ಹಲ್ಲೆಗೊಳಗಾಗಿದ್ದಾರೆ ಅವರ ಮೇಲೆ 307 ಕೇಸ್ ಹಾಕಿದ್ದಾರೆ. ಹಲ್ಲೆ ಮಾಡಿದವರ ಮೇಲೆ ಯಾವುದೇ ಕೇಸ್ ಹಾಕಿಲ್ಲ. ಇದು ಯಾವ ರೀತಿಯ ಕಾನೂನು? ಕೇವಲ ಒಂದು ಮತ ಹಾಗೂ ಧರ್ಮದವರ ಮೇಲೆ ಕೇಸ್ ಹಾಕುವಂತಹ ಕೆಲಸ ಆಗಿದೆ. ಪೊಲೀಸ್ ಇಲಾಖೆಗೆ ಯಾರಾದರೂ ಒತ್ತಡ ಹೇರಿದ್ದಾರಾ? ಇದಕ್ಕೆ ಯಾರ ಒತ್ತಡ ಇದೆ ಎಂಬುದು ಸ್ಪಷ್ಟ ಆಗಬೇಕು ಎಂದು ಆಗ್ರಹಿಸಿದ್ದಾರೆ.

ಗೃಹ ಸಚಿವರು ಯಾಕೆ ಘಟನೆ ಬಗ್ಗೆ ಮಾತಾಡ್ತಿಲ್ಲ? ನೀವೇನೂ ತಾಲಿಬಾನ್ ಸಂಸ್ಕೃತಿಯನ್ನ ವಿಸ್ತಾರ ಮಾಡಲು ಹೊರಟಿದ್ದೀರಾ? ಸರಿ, ತಪ್ಪು ಹೇಳಿಕೆಯನ್ನ ಕೊಡಿ. ಗೃಹಸಚಿವರಿಗೆ ಆರ್‌ಎಸ್‌ಎಸ್ ಬಗ್ಗೆ ಮಾತಾಡುವ ದಮ್ಮಿದೆ. ಈ ಮತೀಯವಾದ, ತಾಲಿಬಾನ್ ಸಂಸ್ಕೃತಿ ವಿರುದ್ಧ ಯಾಕೆ ಮಾತಾಡ್ತಾ ಇಲ್ಲ?

ಹಲ್ಲೆ ಮಾಡಿದವರ ಮೇಲೆ 307 ಕೇಸ್ ಹಾಕದೆ, ಹಲ್ಲೆಗೊಳಗಾದವರ ಮೇಲೆ ಕೇಸ್ ಹಾಕಿರೋದು ಹಾಸ್ಯಾಸ್ಪದ. ಇಂತಹ ಕಾನೂನು ದೇಶದಲ್ಲೇ ಮೊದಲ ಬಾರಿಗೆ ಆಗಿರೋದು. ಎಸ್ಪಿಯವರು ಜಿಲ್ಲೆಯಲ್ಲಿ ಏನು ಮಾಡುತ್ತಿದ್ದಾರೆ? ಈ ಕೂಡಲೇ ಹಲ್ಲೆ ಮಾಡಿದವರ ಮೇಲೆ ಕೇಸ್ ದಾಖಲು ಮಾಡಬೇಕು ಇಲ್ಲದಿದ್ದಲ್ಲಿ ಬಿಜೆಪಿ ಹೋರಾಟ ಮಾಡಲಿದೆ. ಮುಂದೆ ಆಗುವ ಎಲ್ಲಾ ಘಟನೆಗಳಿಗೆ ಸರ್ಕಾರವೇ ಜವಾಬ್ದಾರಿ ಎಂದು ಎಚ್ಚರಿಸಿದ್ದಾರೆ.


Spread the love

About Laxminews 24x7

Check Also

ಕಾಲು ಜಾರಿ ಹಳಿ ಮೇಲೆ ಬಿದ್ದ ವ್ಯಕ್ತಿ; ರೈಲು ಹರಿದು ಸ್ಥಳದಲ್ಲೇ ಸಾವು

Spread the loveಹಾಸನ: ರೈಲು ಹತ್ತುವಾಗ ಕಾಲು ಜಾರಿ ವ್ಯಕ್ತಿಯೊಬ್ಬರು ಹಳಿ ಮೇಲೆ ಬಿದ್ದಿದ್ದು, ಆತನ ಮೇಲೆಯೇ ರೈಲು ಹರಿದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ