Breaking News

ಪಾಗಲ್‌ ಪ್ರೇಮಿಯಿಂದ ಟಾರ್ಚರ್‌ – ಕೆರೆಗೆ ಹಾರಿ ಸಾಗರದ ಯುವತಿ ಆತ್ಮಹತ್ಯೆ

Spread the love

 ಶಿವಮೊಗ್ಗ: ಪಾಗಲ್‌ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಸಾಗರ  ತಾಲೂಕಿನ ಬೆಳಮಕ್ಕಿ ಗ್ರಾಮದ ಯುವತಿಯೊಬ್ಬಳು ಬೆಂಗಳೂರಲ್ಲಿ  ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ವಾಣಿ (22 )ಆತ್ಮಹತ್ಯೆಗೆ ಶರಣಾದ ಯುವತಿ. ಹೆಚ್‌ಎಸ್‌ಆರ್ ಲೇಔಟ್‌ನಲ್ಲಿರುವ ಅಗರ ಕೆರೆಗೆ ಹಾರಿ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್‌ ಬರೆದಿಟ್ಟಿದ್ದಾಳೆ. ಅದರಲ್ಲಿ ಕ್ಲಾಸ್‌ಮೇಟ್‌ ಅಭಿಷೇಕ್ ಎಂಬಾತನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ತಿಳಿಸಿದ್ದಾಳೆ.

ಅಭಿಷೇಕ್‌, ಯುವತಿಗೆ ವಾಟ್ಸಪ್‌ನಲ್ಲಿ ವಿಡಿಯೋ, ಫೋಟೋಸ್ ಕಳುಹಿಸಿ ಬ್ಲಾಕ್‌ಮೇಲ್‌ ಮಾಡುತಿದ್ದ. ಕರೆದಾಗಲೆಲ್ಲ ರೂಮಿಗೆ ಬರಬೇಕು ಎಂದು ಮೆಸೇಜ್ ಮಾಡುತ್ತಿದ್ದ. ನಮ್ಮ ಕುಟುಂಬದ ಮರ್ಯಾದೆ ಹೋಗಬಾರದು ಎಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಅಭಿಷೇಕ್‌ಗೆ ಶಿಕ್ಷೆ ಆಗಬೇಕು ಎಂದು ಡೆತ್‌ನೋಟ್‌ನಲ್ಲಿ ಯುವತಿ ಉಲ್ಲೇಖಿಸಿದ್ದಾಳೆ.

ಕಾಲೇಜು ದಿನಗಳಲ್ಲಿ ವಾಣಿ ಮತ್ತು ಅಭಿಷೇಕ್ ಒಟ್ಟಿಗೆ ಓದುತ್ತಿದ್ದರು. ಸುಮಾರು ಒಂದು ವರ್ಷದ ಹಿಂದೆ ಯುವತಿ ಕೆಲಸ ಹುಡುಕಿ ಬೆಂಗಳೂರಿಗೆ ಬಂದಿದ್ದಳು. ಚಿನ್ನದ ಅಂಗಡಿಯೊಂದರಲ್ಲಿ ಆಕೆ ಕೆಲಸ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ.

ಹೆಚ್‌ಎಸ್‌ಆರ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಅಭಿಷೇಕ್‌ನನ್ನು ಪೊಲೀಸರು ಹುಡುಕುತ್ತಿದ್ದಾರೆ.


Spread the love

About Laxminews 24x7

Check Also

ಕಾಲು ಜಾರಿ ಹಳಿ ಮೇಲೆ ಬಿದ್ದ ವ್ಯಕ್ತಿ; ರೈಲು ಹರಿದು ಸ್ಥಳದಲ್ಲೇ ಸಾವು

Spread the loveಹಾಸನ: ರೈಲು ಹತ್ತುವಾಗ ಕಾಲು ಜಾರಿ ವ್ಯಕ್ತಿಯೊಬ್ಬರು ಹಳಿ ಮೇಲೆ ಬಿದ್ದಿದ್ದು, ಆತನ ಮೇಲೆಯೇ ರೈಲು ಹರಿದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ