Breaking News

ಕಾಲು ಜಾರಿ ಹಳಿ ಮೇಲೆ ಬಿದ್ದ ವ್ಯಕ್ತಿ; ರೈಲು ಹರಿದು ಸ್ಥಳದಲ್ಲೇ ಸಾವು

Spread the love

ಹಾಸನ: ರೈಲು ಹತ್ತುವಾಗ ಕಾಲು ಜಾರಿ ವ್ಯಕ್ತಿಯೊಬ್ಬರು ಹಳಿ ಮೇಲೆ ಬಿದ್ದಿದ್ದು, ಆತನ ಮೇಲೆಯೇ ರೈಲು ಹರಿದು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆಯ  ಹೊಳೆನರಸೀಪುರ ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.

ಹೊಳೆನರಸೀಪುರ ತಾಲೂಕಿನ ಕೆ.ಮುದ್ದನಹಳ್ಳಿ ಗ್ರಾಮದ ನಾಗರಾಜು (48) ಮೃತ ವ್ಯಕ್ತಿ. ಬೆಂಗಳೂರಿಗೆ ತೆರಳಲು ನಾಗರಾಜು ಹೊಳೆನರಸೀಪುರ ರೈಲ್ವೆ ನಿಲ್ದಾಣಕ್ಕೆ ಬಂದಿದ್ದ. ಈ ವೇಳೆ ರೈಲು ಹೊರಡಲು ಆರಂಭಿಸಿದ್ದು, ನಿಧಾನವಾಗಿ ಚಲಿಸುತ್ತಿದ್ದ ರೈಲನ್ನು ಹತ್ತಲು ನಾಗರಾಜು ಪ್ರಯತ್ನಿಸಿದ್ದಾನೆ. ಆದರೆ, ರೈಲು ಹತ್ತುವಾಗ ಏಕಾಏಕಿ ಕಾಲು ಜಾರಿ ಹಳಿ ಮೇಲೆ ಬಿದ್ದಿದ್ದಾನೆ. ತಕ್ಷಣವೇ ರೈಲು ವ್ಯಕ್ತಿಯ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ.

ಘಟನೆ ತಿಳಿಯುತ್ತಿದ್ದಂತೆ ರೈಲ್ವೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅರಸೀಕೆರೆ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಪಾಗಲ್‌ ಪ್ರೇಮಿಯಿಂದ ಟಾರ್ಚರ್‌ – ಕೆರೆಗೆ ಹಾರಿ ಸಾಗರದ ಯುವತಿ ಆತ್ಮಹತ್ಯೆ

Spread the love ಶಿವಮೊಗ್ಗ: ಪಾಗಲ್‌ ಪ್ರೇಮಿಯ ಕಿರುಕುಳಕ್ಕೆ ಬೇಸತ್ತು ಸಾಗರ  ತಾಲೂಕಿನ ಬೆಳಮಕ್ಕಿ ಗ್ರಾಮದ ಯುವತಿಯೊಬ್ಬಳು ಬೆಂಗಳೂರಲ್ಲಿ  ಕೆರೆಗೆ ಹಾರಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ