Breaking News

ವಿದ್ಯುತ್ ಕಂಬಕ್ಕೆ ಪಿಕಪ್ ಡಿಕ್ಕಿ – ಮೂವರು ಕಾರ್ಮಿಕರ ದುರ್ಮರಣ, 15 ಮಂದಿಗೆ ಗಾಯ

Spread the love

ಯಾದಗಿರಿ: ವಿದ್ಯುತ್ ಕಂಬಕ್ಕೆ  ಬುಲೆರೋ ಪಿಕಪ್  ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಕಾರ್ಮಿಕರು  ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಯಾದಗಿರಿ  ಜಿಲ್ಲೆಯ ಶಹಾಪುರ  ತಾಲೂಕಿನ ಮಡ್ನಾಳ್ ಗ್ರಾಮದ ಬಳಿ ನಡೆದಿದೆ.

ಭಾಗ್ಯಶ್ರೀ (35), ಸತ್ಯಮ್ಮ (30), ಹೊನ್ನಿಂಗಮ್ಮ (18) ಮೃತ ಕಾರ್ಮಿಕರು. ಚಾಲಕನ ನಿಯಂತ್ರಣ ತಪ್ಪಿ ವಾಹನ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮೂವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ ಗಾಯಗೊಂಡ ಕಾರ್ಮಿಕರನ್ನು ಶಹಾಪುರ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕಾರ್ಮಿಕರು ಬೆಳಗಿನ ಜಾವವೇ ಮಡ್ನಾಳ್ ಗ್ರಾಮದ ಸುತ್ತಮುತ್ತಲಿನ ಜಮೀನಿನಲ್ಲಿ ಹತ್ತಿ ಕಸ ತೆಗೆಯುವ ಕೂಲಿ ಕೆಲಸಕ್ಕೆ ತೆರಳಿದ್ದರು. ಕೆಲಸ ಮುಗಿಸಿ ಮನೆಗೆ ವಾಪಸ್ ಬರುವಾಗ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಭೀಮರಾಯನಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.


Spread the love

About Laxminews 24x7

Check Also

ಟಿಬಿ ಮುಕ್ತ ಭಾರತ ಅಭಿಯಾನ ಅತ್ಯಂತ ಶ್ಲಾಘನೀಯ

Spread the loveಬೆಳಗಾವಿ : ಭಾರತವನ್ನು ಕ್ಷಯರೋಗ (ಟಿಬಿ) ಮುಕ್ತ ರಾಷ್ಟ್ರವನ್ನಾಗಿ ರೂಪಿಸುವ ಸಂಕಲ್ಪದೊಂದಿಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಅಭಿಯಾನ ಅತ್ಯಂತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ