Breaking News

ಬೆಂಗ್ಳೂರಲ್ಲಿ ಭಾರತದ ಮೊದಲ ಬೀದಿನಾಯಿ ಶೆಲ್ಟರ್ ನಿರ್ಮಾಣ

Spread the love

ಬೆಂಗಳೂರು: ಸುಪ್ರೀಂ ಕೋರ್ಟ್ ನಿರ್ದೇಶನದ ಬಳಿಕ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಡಾಗ್ ಶೆಲ್ಟರ್  ನಿರ್ಮಾಣ ಆಗಿದೆ. ಉತ್ತರ ನಗರ ಪಾಲಿಕೆಯ ಮೇಡಿ ಅಗ್ರಹಾರದಲ್ಲಿ ಡಾಗ್ ಶೆಲ್ಟರ್ ನಿರ್ಮಾಣ ಆಗಿದ್ದು, 500 ನಾಯಿಗಳಿಗೆ ಆಶ್ರಯ ನೀಡುವ ಸಾಮರ್ಥ್ಯ ಹೊಂದಿದೆ.

ಬೀದಿನಾಯಿಗಳಿಗೆ ಶೆಲ್ಟರ್ ನಿರ್ಮಾಣ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶನ ಮಾಡಿತ್ತು. ಕೋರ್ಟ್ ನಿರ್ದೇಶನದ ಬಳಿಕ ಇದೇ ಮೊದಲ ಬಾರಿಗೆ ಪ್ರಥಮ ಡಾಗ್ ಶೆಲ್ಟರ್ ಬೆಂಗಳೂರು ಉತ್ತರ ನಗರ ಪಾಲಿಕೆಯ ಮೇಡಿ ಅಗ್ರಹಾರದಲ್ಲಿ ನಿರ್ಮಾಣ ಮಾಡಲಾಗಿದೆ. 2 ಕೋಟಿ ವೆಚ್ಚದಲ್ಲಿ 500 ನಾಯಿಗಳಿಗೆ ಆಶ್ರಯ ನೀಡುವ 25 ಬ್ಯಾರಕ್‌ಗಳನ್ನು ನಿರ್ಮಾಣ ಮಾಡಲಾಗಿದೆ. ಪ್ರತಿ ಬ್ಯಾರಕ್‌ನಲ್ಲಿ 20 ನಾಯಿಗಳಿಗೆ ಆಶ್ರಯ ನೀಡಬಹುದಾಗಿದೆ.

ಈಗ 40 ಬೀದಿನಾಯಿಗಳನ್ನು ಹಿಡಿದು ಹೊಸ ಬೀದಿನಾಯಿ ಶೆಲ್ಟರ್‌ನಲ್ಲಿ ಆಶ್ರಯ ನೀಡಲಾಗಿದೆ. ಪ್ರತಿದಿನ ಕೂಡ ಬೀದಿನಾಯಿಗಳನ್ನ ಸೆರೆ ಇಡಿದು ಬಿಡಲಾಗುತ್ತಿದೆ. ದಿನಕ್ಕೆ ಎರಡು ಬಾರಿ ಊಟ ನೀಡಲಾಗ್ತಿದೆ.

ಇದರಿಂದ ಬೆಂಗಳೂರಲ್ಲಿ ಬೀದಿನಾಯಿಗಳ ಹಾವಳಿ ಕಡಿಮೆ ಆಗುತ್ತಾ? ಶೆಲ್ಟರ್‌ ನಿರ್ವಹಣೆ ಹೇಗೆ ಸಾಗಲಿದೆ ಎಂದು ಕಾದು ನೋಡಬೇಕಿದೆ.


Spread the love

About Laxminews 24x7

Check Also

ಟಿಬಿ ಮುಕ್ತ ಭಾರತ ಅಭಿಯಾನ ಅತ್ಯಂತ ಶ್ಲಾಘನೀಯ

Spread the loveಬೆಳಗಾವಿ : ಭಾರತವನ್ನು ಕ್ಷಯರೋಗ (ಟಿಬಿ) ಮುಕ್ತ ರಾಷ್ಟ್ರವನ್ನಾಗಿ ರೂಪಿಸುವ ಸಂಕಲ್ಪದೊಂದಿಗೆ ಕೇಂದ್ರ ಸರ್ಕಾರ ಕೈಗೊಂಡಿರುವ ಅಭಿಯಾನ ಅತ್ಯಂತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ