Breaking News

ರೈತರಿಗೆ ಮಧ್ಯಂತರ ಬೆಳೆ ಹಾನಿ ಪರಿಹಾರವಾಗಿ ₹11 ಕೋಟಿ ಬಿಡುಗಡೆ

Spread the love

ಬೆಳಗಾವಿ: ಮುಂಗಾರು ಅವಧಿಯಲ್ಲಿ ತೀವ್ರ ಮಳೆ ಕೊರತೆಯಿಂದ ಹೆಸರು, ಉದ್ದು, ಶೇಂಗಾ, ಸೂರ್ಯಕಾಂತಿ, ಹತ್ತಿ ಸೇರಿದಂತೆ ವಿವಿಧ ಬೆಳೆಗಳಿಗೆ ಹಾನಿಯಾಗಿದ್ದು, ರೈತರಿಗೆ ಮಧ್ಯಂತರ ಬೆಳೆ ಹಾನಿ ಪರಿಹಾರವಾಗಿ ₹11 ಕೋಟಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ತಿಳಿಸಿದರು.
ರಾಮದುರ್ಗ, ಸವದತ್ತಿ ಹಾಗೂ ಯರಗಟ್ಟಿ ತಾಲೂಕುಗಳಲ್ಲಿ ಸುಮಾರು 29 ಸಾವಿರ ಎಕರೆ ಪ್ರದೇಶದಲ್ಲಿ ಹೆಸರು ಮತ್ತು ಉದ್ದು ಬೆಳೆ ಹಾನಿಯಾಗಿದೆ. ಬೆಳೆ ಹಾನಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ನೆರವಾಗುವ ಉದ್ದೇಶದಿಂದ ವಿಮಾ ಕಂಪನಿಗಳ ಮೂಲಕ ಮಧ್ಯಂತರ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದರು.
ಅಂದಾಜು 25 ಸಾವಿರ ರೈತರಿಗೆ ಪ್ರತಿ ಎಕರೆಗೆ ಗರಿಷ್ಠ ₹2,500 ವರೆಗೆ ಬೆಳೆ ಹಾನಿ ಪರಿಹಾರ ದೊರೆಯಲಿದ್ದು, ಅರ್ಹ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಹಣ ಜಮೆಯಾಗಲಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಮಳೆ ಕೊರತೆಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಮಧ್ಯಂತರ ಪರಿಹಾರದಿಂದ ತುಸು ನೆರವಾಗಲಿದ್ದು, ಉಳಿದಂತೆ ಬೆಳೆ ಪರಿಸ್ಥಿತಿ ಹಾಗೂ ಹಾನಿಯ ಪ್ರಮಾಣವನ್ನು ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

Spread the love

About Laxminews 24x7

Check Also

ಕಾವೇರಿ ತೀರ್ಥೋದ್ಭವ ಆಚರಣೆಗೆ 2 ಕೋಟಿ ರೂ. ಅನುದಾನ – ಡಿಕೆಶಿ ಘೋಷಣೆ

Spread the loveಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಕ್ಟೋಬರ್ 17ರಂದು ನಡೆಯಲಿರುವ ಪವಿತ್ರ ಕಾವೇರಿ ತೀರ್ಥೋದ್ಭವ ಆಚರಣೆಗೆ 2 ಕೋಟಿ ರೂ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ