Breaking News

ಮಾಜಿ ಶಾಸಕ ಪ್ರೀತಂಗೌಡಗೆ ಬಿಗ್‌ ರಿಲೀಫ್‌; ಲೋಕಾಯುಕ್ತ ತನಿಖೆ ಆದೇಶಕ್ಕೆ ಹೈಕೋರ್ಟ್‌ ತಡೆ

Spread the love

ಹಾಸನ: ಮಾಜಿ ಶಾಸಕ ಪ್ರೀತಂಗೌಡಗೆ ಹೈಕೋರ್ಟ್‌ನಿಂದ ಬಿಗ್‌ ರಿಲೀಫ್‌ ಸಿಕ್ಕಿದೆ. ಜನಪ್ರತಿನಿಧಿಗಳ ನ್ಯಾಯಾಲಯದ ಲೋಕಾಯುಕ್ತ ತನಿಖೆ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದಲ್ಲಿ ಮಾಜಿ ಶಾಸಕ ಪ್ರೀತಂಗೌಡ ವಿರುದ್ಧ ಲೋಕಾಯುಕ್ತ ಎಸ್ಪಿ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶ ಹೊರಡಿಸಿತ್ತು.

ಜನಪ್ರತಿನಿಧಿಗಳ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ನಲ್ಲಿ ತಡೆ ನೀಡಿದೆ. ಎಲ್ಲಾ ಪ್ರಕ್ರಿಯೆಗಳಿಗೂ ತಡೆಯಾಜ್ಞೆ ನೀಡಿ ನ್ಯಾಯಮೂರ್ತಿ ನಾಗಪ್ರಸನ್ನ ಅವರ ಪೀಠದಿಂದ ಆದೇಶ ಹೊರಬಿದ್ದಿದೆ.

ಲೋಕಾಯುಕ್ತ ಎಸ್ಪಿ ಹಾಗೂ ಸಂದೀಪ.ಬಿ.ಇ. ಅವರಿಗೆ ನೋಟಿಸ್ ನೀಡುವಂತೆ ನ್ಯಾಯಮೂರ್ತಿಗಳು ಆದೇಶ ಹೊರಡಿಸಿದ್ದಾರೆ.


Spread the love

About Laxminews 24x7

Check Also

ಕಾವೇರಿ ತೀರ್ಥೋದ್ಭವ ಆಚರಣೆಗೆ 2 ಕೋಟಿ ರೂ. ಅನುದಾನ – ಡಿಕೆಶಿ ಘೋಷಣೆ

Spread the loveಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಕ್ಟೋಬರ್ 17ರಂದು ನಡೆಯಲಿರುವ ಪವಿತ್ರ ಕಾವೇರಿ ತೀರ್ಥೋದ್ಭವ ಆಚರಣೆಗೆ 2 ಕೋಟಿ ರೂ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ