Breaking News

ಭೀಮಾ ನದಿಯಲ್ಲಿ ಸ್ನಾನ ಮಾಡಲು ಹೋದ ಯುವಕ ನಾಪತ್ತೆ

Spread the love

ಯಾದಗಿರಿ: ಭೀಮಾ ನದಿಯಲ್ಲಿ  ಸ್ನಾನ ಮಾಡಲು ಹೋದ ಯುವಕ ನಾಪತ್ತೆಯಾಗಿರುವ ಘಟನೆ ಯಾದಗಿರಿ ತಾಲೂಕಿನ ಮಲ್ಹಾರ  ಗ್ರಾಮದ ಹೊರಭಾಗದಲ್ಲಿ ನಡೆದಿದೆ.

ರಂಗಯ್ಯ (21) ನಾಪತ್ತೆಯಾದ ಯುವಕ. ಬೆಳೆಗೆ ಕ್ರಿಮಿನಾಶಕ ಸಿಂಪಡಣೆ ಮಾಡಿ ಸ್ನೇಹಿತರ ಜೊತೆ ಸ್ನಾನಕ್ಕೆ ತೆರಳಿದಾಗ ದುರ್ಘಟನೆ ಸಂಭವಿಸಿದೆ. ನಾಲ್ಕು ಜನ ಸ್ನೇಹಿತರು ನದಿಗೆ ಸ್ನಾನಕ್ಕೆ ತೆರಳಿದ್ದರು. ಈ ವೇಳೆ ಕಾಲು ಜಾರಿ ಬಿದ್ದ ಮೂವರನ್ನು ಸ್ಥಳೀಯ ಮೀನುಗಾರರು ರಕ್ಷಣೆ ಮಾಡಿದ್ದಾರೆ.

ನಾಪತ್ತೆಯಾದ ಇನ್ನೋರ್ವ ಯುವಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಯಾದಗಿರಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಕಾವೇರಿ ತೀರ್ಥೋದ್ಭವ ಆಚರಣೆಗೆ 2 ಕೋಟಿ ರೂ. ಅನುದಾನ – ಡಿಕೆಶಿ ಘೋಷಣೆ

Spread the loveಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಅಕ್ಟೋಬರ್ 17ರಂದು ನಡೆಯಲಿರುವ ಪವಿತ್ರ ಕಾವೇರಿ ತೀರ್ಥೋದ್ಭವ ಆಚರಣೆಗೆ 2 ಕೋಟಿ ರೂ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ