Breaking News

ಕೊಡಗಿನಲ್ಲಿ ವರುಣನ ಅಬ್ಬರ – ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!

Spread the love

ಮಡಿಕೇರಿ: ರಾಜ್ಯದಲ್ಲಿ ಮಳೆ ಕೊರತೆ ನೀಗಿಸಲು ಮೋಡ ಬಿತ್ತನೆ ಕುರಿತು ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ, ಕಾವೇರಿಯ  ತವರು ಕೊಡಗು ಜಿಲ್ಲೆಯಲ್ಲಿ ವರುಣದೇವ ಅಬ್ಬರಿಸಿ ಬೊಬ್ಬಿರಿಯುತ್ತಿದ್ದಾನೆ.

ಕಳೆದ ಮೂರು ದಿನಗಳಿಂದ ಜಿಲ್ಲೆಯಾದ್ಯಂತ ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.

ಭಾಗಮಂಡಲ ಹಾಗೂ ಬ್ರಹ್ಮಗಿರಿ ತಪ್ಪಲಿನಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಪರಿಣಾಮವಾಗಿ ಪವಿತ್ರ ತ್ರಿವೇಣಿ ಸಂಗಮ ಹಾಗೂ ಸಮೀಪದ ಉದ್ಯಾನವನ ಈ ಋತುವಿನಲ್ಲಿ ಮೂರನೇ ಬಾರಿಗೆ ಸಂಪೂರ್ಣ ಮುಳುಗಡೆಯಾಗಿದೆ.

ಹಾರಂಗಿ ಜಲಾನಯನ ಪ್ರದೇಶದಲ್ಲೂ ವ್ಯಾಪಕ ಮಳೆಯಾಗುತ್ತಿದ್ದು, ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಗಣನೀಯವಾಗಿ ಹೆಚ್ಚಾಗಿದೆ. ಸೋಮವಾರ ರಾತ್ರಿಯಿಂದಲೇ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಬಿರುಸಿನ ಮಳೆ ಮುಂದುವರಿದಿದೆ. ಮಳೆಯ ಆರ್ಭಟ ಮುಂದುವರಿದಿರುವುದರಿಂದ ನದಿ ಪಾತ್ರದ ಜನರು ಹಾಗೂ ಪ್ರವಾಸಿಗರು ಮುನ್ನೆಚ್ಚರಿಕೆ ವಹಿಸುವಂತೆ ಸ್ಥಳೀಯ ಆಡಳಿತ ಸೂಚಿಸಿದೆ.

ಕಳೆದ ಕೆಲ ದಿನಗಳಿಂದ ಜಿಲ್ಲೆಯ ವಿವಿಧೆಡೆ ಸುರಿಯುತ್ತಿರುವ ಮಳೆಯಿಂದ ಕಾಫಿ, ಮೆಣಸು ಸೇರಿದಂತೆ ಹಲವು ಬೆಳೆಗಳ ಮೇಲೆ ಪರಿಣಾಮ ಬೀರುವ ಆತಂಕ ರೈತರಲ್ಲಿ ಮೂಡಿದೆ. ಕಾಫಿ ತೋಟಗಳಲ್ಲಿ ಹೂವು ಹಾಗೂ ಕಾಯಿಗಳು ಉದುರುವ ಸಾಧ್ಯತೆ ಇದ್ದು, ನಿರಂತರ ಮಳೆಯಿಂದ ಬೆಳೆಗಾರರು ಚಿಂತೆಗೆ ಒಳಗಾಗಿದ್ದಾರೆ.

Spread the love

About Laxminews 24x7

Check Also

ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ- UP ವಿದ್ಯಾರ್ಥಿನಿಯ ಅರ್ಜಿ ವಜಾ

Spread the loveಲಕ್ನೋ: ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ