Breaking News

ರಾಜ್ಯದ ಹಲವೆಡೆ ಭಾರೀ ಮಳೆ ಮುನ್ಸೂಚನೆ – ಕರಾವಳಿ, ಮಲೆನಾಡಿನ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

Spread the love

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ , ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ ಜಿಲ್ಲೆಯಲ್ಲಿ ಒಂದೆರಡು ಕಡೆ ಭಾರಿ ಮಳೆಯಾಗಲಿದೆ. ಅಲ್ಲದೇ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆ ಇದೆ.

ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲೂ ಒಂದೆರಡು ಕಡೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಈ ಭಾಗಗಳಲ್ಲಿ ಮಳೆಯೊಂದಿಗೆ ಬಲವಾದ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರುವಂತೆ ಇಲಾಖೆ ಎಚ್ಚರಿಸಿದೆ.

ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳಿಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ಸಹ ಯೆಲ್ಲೋ ಅಲರ್ಟ್ ಘೋಷಿಸಿದೆ.


Spread the love

About Laxminews 24x7

Check Also

ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ- UP ವಿದ್ಯಾರ್ಥಿನಿಯ ಅರ್ಜಿ ವಜಾ

Spread the loveಲಕ್ನೋ: ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ