Breaking News

ಕೆಪಿಎಸ್‌ಸಿ ಹಗರಣ – 329 ಅಭ್ಯರ್ಥಿಗಳಿಗೆ ಸಿಐಡಿ ಶಾಕ್, ಇಂದೇ ವಿಚಾರಣೆಗೆ ಹಾಜರಾಗಲು ನೋಟಿಸ್!

Spread the love

ಬೆಂಗಳೂರು: ರ್ನಾಟಕ ಲೋಕಸೇವಾ ಆಯೋಗ ನಡೆಸಿರು ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಂಡಿದ್ದು, ಅಪರಾಧ ತನಿಖಾ ಇಲಾಖೆ  ಅಧಿಕಾರಿಗಳು 329 ಅಭ್ಯರ್ಥಿಗಳಿಗೆ ಏಕಾಏಕಿ ನೋಟಿಸ್  ಜಾರಿ ಮಾಡಿದ್ದಾರೆ.

ಜಾರಿ ನಿರ್ದೇಶನಾಲಯದ ಮುಂದೆ ಕೆಲವರು ಅಕ್ರಮ ನಡೆಸಿರುವುದಾಗಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ ಬೆನ್ನಲ್ಲೇ ಸಿಐಡಿ ಈ ಮಹತ್ವದ ಕ್ರಮ ಕೈಗೊಂಡಿದೆ.

ನೋಟಿಸ್ ಪಡೆದಿರುವ ಎಲ್ಲಾ 329 ಅಭ್ಯರ್ಥಿಗಳು ಇಂದೇ ಖುದ್ದಾಗಿ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಇಡಿ ನಡೆಸಿದ ಪ್ರತ್ಯೇಕ ವಿಚಾರಣೆ ವೇಳೆ ಲಭ್ಯವಾದ ಮಹತ್ವದ ಮಾಹಿತಿ ಮತ್ತು ತಪ್ಪೊಪ್ಪಿಗೆ ಹೇಳಿಕೆಗಳನ್ನು ಆಧರಿಸಿ ಸಿಐಡಿ ಅಧಿಕಾರಿಗಳು ಈ ಜಾಲವನ್ನು ಮತ್ತಷ್ಟು ಆಳವಾಗಿ ತನಿಖೆ ನಡೆಸಲು ಮುಂದಾಗಿದ್ದಾರೆ.

ಇಷ್ಟೊಂದು ದೊಡ್ಡ ಸಂಖ್ಯೆಯ ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ನೋಟಿಸ್ ನೀಡಿರುವುದು ಪ್ರಕರಣದಲ್ಲಿ ಸಂಚಲನ ಮೂಡಿಸಿದ್ದು, ಅಕ್ರಮದಲ್ಲಿ ಭಾಗಿಯಾದ ಪ್ರಭಾವಿಗಳಿಗೂ ತನಿಖೆಯ ಬಿಸಿ ತಟ್ಟುವ ಸಾಧ್ಯತೆಯಿದೆ.

ಈಗಾಗಲೇ 329 ಅಭ್ಯರ್ಥಿಗಳಿಂದ ವಶಪಡಿಸಿಕೊಂಡಿರುವ 658 ಓಎಂಆರ್ ಕಾರ್ಬನ್ ಶೀಟ್‍ಗಳನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ(FSL) ರವಾನಿಸಲಾಗಿದೆ. ಓಎಂಆರ್ ಶೀಟ್‍ಗಳೊಂದಿಗೆ ಕಾರ್ಬನ್ ಶೀಟ್‍ಗಳನ್ನು ತಾಳೆ ಹಾಕಿ ಪರಿಶೀಲಿಸುವ ಉದ್ದೇಶದಿಂದ ಅವುಗಳನ್ನು ಎಫ್‍ಎಸ್‍ಎಲ್‍ಗೆ ಕಳುಹಿಸಲಾಗಿದೆ.

ನೇಮಕಾತಿಯಲ್ಲಿ ನಡೆದಿದೆ ಎನ್ನಲಾದ ಗೋಲ್‌ಮಾಲ್‌ಗೆ ಸಂಬಂಧಿಸಿದಂತೆ ಅಧಿಕಾರಿಗಳು ಅಭ್ಯರ್ಥಿಗಳನ್ನು ತೀವ್ರ ವಿಚಾರಣೆಗೆ ಒಳಪಡಿಸಲಿದ್ದು, ಮತ್ತಷ್ಟು ಸ್ಫೋಟಕ ಸತ್ಯಗಳು ಹೊರಬೀಳುವ ನಿರೀಕ್ಷೆಯಿದೆ.


Spread the love

About Laxminews 24x7

Check Also

ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ- UP ವಿದ್ಯಾರ್ಥಿನಿಯ ಅರ್ಜಿ ವಜಾ

Spread the loveಲಕ್ನೋ: ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ