Breaking News

ಬಿಬಿಎಂಪಿ ಆರೋಗ್ಯಾಧಿಕಾರಿಯ ಒಂದೇ ಕುಟುಂಬದ ಮೂವರು ಕೊರೋನಾಗೆ ಬಲಿ..!

Spread the love

ಬೆಂಗಳೂರು, ಜು.24- ಬಿಬಿಎಂಪಿ ಆರೋಗ್ಯಾಧಿಕಾರಿ ಕುಟುಂಬದ ಮೂವರು ಕೊರೊನಾಗೆ ಬಲಿಯಾಗಿರುವ ಘಟನೆ ಬೆಂಗಳೂರನ್ನು ಬೆಚ್ಚಿಬೀಳಿಸಿದೆ. ಕೇವಲ ನಾಲ್ಕು ದಿನಗಳಲ್ಲಿ ಈ ಕುಟುಂಬ ಮೂವರನ್ನು ಕಳೆದುಕೊಂಡಿದೆ.

ಬಿಬಿಎಂಪಿ ಬೊಮ್ಮನಹಳ್ಳಿ ಆರೋಗ್ಯಾಧಿಕಾರಿ ಕುಟುಂಬದಲ್ಲಿ ಮೂವರು ಕೊರೊನಾಗೆ ತುತ್ತಾಗಿದ್ದಾರೆ. ಕಳೆದ ಸೋಮವಾರ ತಂದೆಯ ಸಾವಿನಿಂದ ಮನನೊಂದಿದ್ದ ಅಧಿಕಾರಿ ಬುಧವಾರ ತನ್ನ ಭಾವನನ್ನು ಕಳೆದುಕೊಂಡಿದ್ದಾರೆ. ಗುರುವಾರ ಅವರ ತಾಯಿ ಬಲಿಯಾಗಿದ್ದಾರೆ.

ಕೊರೊನಾ ಸೋಂಕಿನಿಂದ ಈ ಅಧಿಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟಾರೆ ಈ ಕುಟುಂಬದಲ್ಲಿ ಮೂವರು ಈ ಸೋಂಕಿಗೆ ಬಲಿಯಾಗಿದ್ದಾರೆ. ಬಿಬಿಎಂಪಿಯ ಆರೋಗ್ಯಾಧಿಕಾರಿಯಾಗಿರುವ ಇವರ ಕುಟುಂಬದಲ್ಲೇ ಮೂವರು ಈ ರೋಗಕ್ಕೆ ಬಲಿಯಾಗಿರುವುದು ಆತಂಕ ಹೆಚ್ಚುಗೊಳಿಸಿದೆ.

ಸೂಕ್ತ ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದಾರೋ ಅಥವಾ ಸರಿಯಾದ ಆರೈಕೆ ಇಲ್ಲದೆ ಸಾವನ್ನಪ್ಪಿದ್ದಾರೋ ಎಂಬ ಕಾರಣ ಗೊತ್ತಾಗಿಲ್ಲ.ಒಟ್ಟಾರೆ ಬೆಂಗಳೂರು ನಗರದಲ್ಲಿ ಸೋಂಕಿತರು ಮತ್ತು ಸೋಂಕಿನಿಂದ ಸಾವನ್ನಪ್ಪುವವರ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇದಕ್ಕೆ ಕೊರೊನಾ ವಾರಿಯರ್ಸ್‍ಗಳು ಬಲಿಯಾಗುವುದರ ಜತೆಗೆ ಅವರ ಕುಟುಂಬದವರೂ ಕೂಡ ಬಲಿಯಾಗುತ್ತಿರುವುದು ದುರಂತವೇ ಸರಿ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ