Breaking News

ಈ ಬಾರಿಯ ದಸರಾದಲ್ಲಿ ಕಂಬಳ ಇರುತ್ತದೆ: ಯತೀಂದ್ರ

Spread the love

ಮೈಸೂರು: ಈ ಬಾರಿಯ ದಸರಾದಲ್ಲಿ  ಕಂಬಳ  ಇರುತ್ತದೆ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.

ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈಗಾಗಲೇ ಜಾಗ ಗುರುತು ಮಾಡಿರುವ ಜಾಗದಲ್ಲಿ ಕಂಬಳ ನಡೆಯುತ್ತದೆ. ಸಿಎಂ ಕೂಡ ಕಂಬಳ ನಡೆಸಿ ಎಂದು ಸೂಚನೆ ಕೊಟ್ಟಿದ್ದಾರೆ ಎಂದರು.

ಇಂದು ಗಜಪಯಣ ಆರಂಭವಾಗಿದೆ. ವೀರನಹೊಸಹಳ್ಳಿಯಲ್ಲಿ ಪೂಜೆ ಸಲ್ಲಿಸಲಾಗಿದೆ. 25 ವರ್ಷಗಳಿಂದ ದಸರಾದಲ್ಲಿ ಅಭಿಮನ್ಯು ಭಾಗಿಯಾಗಿತ್ತು. ಈ ಬಾರಿ ಅಭಿಮನ್ಯು ನಿವೃತ್ತಿಯಾಗಿದೆ. ಅಭಿಮನ್ಯು 6 ಬಾರಿ ಅಂಬಾರಿ ಹೊತ್ತಿತ್ತು. ಹೀಗಾಗಿ ಅಭಿಮನ್ಯುವಿಗೆ ಪೂಜೆ ಸಲ್ಲಿಸಿ ಬೀಳ್ಕೊಡುಗೆ ಕೊಡಲಾಗಿದೆ. ನಿಶಾನೆ ಆನೆಯಾಗಿ ಅಭಿಮನ್ಯು ಕರೆತರುವ ಬಗ್ಗೆ ಇನ್ನೂ ಫೈನಲ್ ಆಗಿಲ್ಲ. ಸಾಧ್ಯತೆಗಳನ್ನು ನೋಡಿಕೊಂಡು ಆ ಬಗ್ಗೆ ತೀರ್ಮಾನ ಮಾಡುತ್ತೇವೆ. ಈ ಬಾರಿ ಅಂಬಾರಿ ಹೊರುವ ಆನೆಯನ್ನು ಇನ್ನೂ ಆಯ್ಕೆ ಮಾಡಿಲ್ಲ. ತಾಲೀಮು ನಡೆಸಿದ ಬಳಿಕ ಅದನ್ನು ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದರು.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ