ಕಠ್ಮಂಡು: ನೇಪಾಳದಲ್ಲಿ ಉಂಟಾಗಿರುವ ರಣ ಭೀಕರ ಪ್ರವಾಹದಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ. 41 ಭದ್ರತಾ ಸಿಬ್ಬಂದಿ ಸೇರಿ ನೂರಾರು ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ಭೋಟೆ ಕೋಶಿ ನದಿಯಲ್ಲಿ ಉಂಟಾದ ಹಠಾತ್ ಪ್ರವಾಹದ ನಂತರ ನೂರಾರು ಜನ ಕಾಣೆಯಾಗಿದ್ದಾರೆ. ಇನ್ನೂ ಕಾಣೆಯಾಗಿರುವ 41 ಭದ್ರತಾ ಸಿಬ್ಬಂದಿ ಪೈಕಿ 32 ಮಂದಿ ನೇಪಾಳ ಪೊಲೀಸರೇ ಆಗಿದ್ದಾರೆ. 9 ಮಂದಿ ಸಶಸ್ತ್ರ ಪೊಲೀಸ್ ಪಡೆಗೆ ಸೇರಿದವರಾಗಿದ್ದಾರೆ. ಈವರೆಗೆ ಮೃತ 8 ಶವಗಳನ್ನ ಪತ್ತೆಹಚ್ಚಲಾಗಿದ್ದು, ಉಳಿದವರಿಗಾಗಿ ಯುದ್ಧೋಪಾದಿಯಲ್ಲಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.
ಇಂದು ಬೆಳಗ್ಗೆ 9 ಗಂಟೆ ಸುಮಾರಿಗೆ ಈ ಪ್ರದೇಶದಲ್ಲಿ ಪ್ರವಾಹ ಉಂಟಾಗಿದ್ದು, ನದಿ ದಂಡೆಯಲ್ಲಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಭೋಟೆ ಕೋಶಿ ನದಿಯ ಉದ್ದಕ್ಕೂ ವಾಸಿಸುವ ನಿವಾಸಿಗಳು ಹೆಚ್ಚಿನ ನಿಗಾ ವಹಿಸುವಂತೆ ಸಲಹೆ ನೀಡಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ನೇಪಾಳ ಟಿಬೆಟ್ ಗಡಿಯ ಬಳಿಯಿರುವ ರಸುವಾ ಜಿಲ್ಲೆಯಲ್ಲಿ ಇಡೀ ಗ್ರಾಮವೇ ಕೊಚ್ಚಿಹೋಗಿದೆ. ಸುಮಾರು 1,000 ಜನರು ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ಶಂಕಿಸಲಾಗಿದೆ. ಆದಾಗ್ಯೂ, ಈ ಅಂಕಿ ಅಂಶವನ್ನು ಇನ್ನೂ ಅಧಿಕೃತವಾಗಿಲ್ಲ. ರಕ್ಷಣಾ ತಂಡಗಳು ಈಗಾಗಲೇ ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ನಡೆಸುತ್ತಿವೆ.
ಹಠಾತ್ ಪ್ರವಾಹದಿಂದ ವ್ಯಾಪಕ ಹಾನಿ
ರಸುವಾ ಜಿಲ್ಲೆಯಲ್ಲಿ ಉಂಟಾದ ಹಠಾತ್ ಪ್ರವಾಹವು ಇಲ್ಲಿನ ಹಲವು ಪ್ರದೇಶಗಳಲ್ಲಿ ವ್ಯಾಪಕ ಹಾನಿಯನ್ನುಂಟುಮಾಡಿದೆ. ಸಯಾಪ್ರು ಬೆಸಿ ಮತ್ತು ತಿಮುರೆ ಪರ್ವತ ಪ್ರದೇಶಗಳು ತೀವ್ರವಾಗಿ ಪರಿಣಾಮ ಬೀರಿವೆ. ಇಲ್ಲಿನ ಕೆಲವು ಹಳ್ಳಿಗಳೇ ಕೊಚ್ಚಿಹೋಗಿವೆ. ಯೋಜನಾ ಸ್ಥಳಗಳೂ ಕೊಚ್ಚಿ ಹೋಗಿವೆ ಎಂದು ವರದಿಯಾಗಿದೆ.
Laxmi News 24×7