ವಿಜಯಪುರ: ತಡರಾತ್ರಿ ದುಷ್ಕರ್ಮಿಗಳು ರೌಡಿಶೀಟರ್‌ನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ವಿಜಯಪುರದ ಸೊಲ್ಲಾಪುರ ರಸ್ತೆಯಲ್ಲಿರುವ ರಿಂಗ್ ರೋಡ್ ಬಳಿ ಈ ಘಟನೆ ನಡೆದಿದೆ. ವಿಜಯಪುರ ನಿವಾಸಿ ಸತೀಶ್ ರೆಡ್ಡಿ (28) ಕೊಲೆಯಾದ ರೌಡಿಶೀಟರ್.
ಶುಕ್ರವಾರ ತಡರಾತ್ರಿ ದುಷ್ಕರ್ಮಿಗಳು ಸತೀಶ್ ರೆಡ್ಡಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ. ಕೊಲೆ ಮಾಡಿದ ನಂತರ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
ಹಳೆಯ ವೈಷಮ್ಯ ಹಾಗೂ ಹಣಕಾಸಿನ ವ್ಯವಹಾರದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯಕ್ಕೆ ಆದರ್ಶನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Laxmi News 24×7