Breaking News

ಪತ್ನಿ ಫೋಟೋ ಸ್ಟೇಟಸ್‌ಗೆ, ಅನೈತಿಕ ಸಂಬಂಧ ಶಂಕೆ – ಕುಡುಗೋಲಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆಗೈದ ದಂಪತಿ

Spread the love

ಬೆಳಗಾವಿ: ಸ್ಟೇಟಸ್ ಹಾಕಿದ್ದಕ್ಕೆ ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯೊಬ್ಬನನ್ನು ದಂಪತಿ ಸೇರಿ ಕುಡುಗೋಲಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಮೂಡಲಗಿ  ತಾಲೂಕಿನ ಕಲ್ಲೋಳಿ  ಪಟ್ಟಣದಲ್ಲಿ ನಡೆದಿದೆ.

ಕಲ್ಲೋಳಿ ಗ್ರಾಮದ ಬನಪ್ಪ ಒಡೆಯರ್ ಮತ್ತು ಲಕ್ಷ್ಮೀ ಒಡೆಯರ್ ಇಬ್ಬರು ಸೇರಿಕೊಂಡು ಗುಜನಟ್ಟಿ ಗ್ರಾಮದ ರಮೇಶ್ ಬಂಟ್ರೋಳಿ ಎಂಬಾತನನ್ನು ಕೊಲೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.

ಕೊಲೆಯಾದ ರಮೇಶ್ ಆರೋಪಿ ಬನಪ್ಪನ ಪತ್ನಿ ಲಕ್ಷ್ಮೀ ಜೊತೆ ಅನೈತಿಕ ಸಂಬಂಧ ಹೊಂದಿದ್ದ ಎಂದು ಶಂಕೆ ವ್ಯಕ್ತವಾಗಿತ್ತು. ಜೊತೆಗೆ ರಮೇಶ್, ಲಕ್ಷ್ಮೀ ಜೊತೆ ಫೋಟೋ ತೆಗೆದುಕೊಂಡಿದ್ದ. ಅಲ್ಲದೇ ಅದನ್ನು ವಾಟ್ಸಾಪ್ ಸ್ಟೇಟಸ್‌ಗೆ ಹಾಕಿದ್ದ. ಇದನ್ನು ಕಂಡು ಆಕ್ರೋಶಗೊಂಡಿದ್ದ ಬನಪ್ಪ ಹಾಗೂ ಲಕ್ಷ್ಮೀ ಈ ಕೃತ್ಯವೆಸಗಿದ್ದಾರೆ.

ಕಲ್ಲೋಳಿ ಗ್ರಾಮದಲ್ಲಿನ ಮನೆಯ ಹಿಂಬಾಗದಲ್ಲಿ, ಸೋಯಾಬಿನ್ ಬೆಳೆದಿದ್ದ ಜಮೀನಿನಲ್ಲೇ ಪತಿ ಮತ್ತು ಪತ್ನಿ ಸೇರಿ ರಮೇಶನನ್ನು ಕುಡುಗೋಲಿನಿಂದ ತಲೆ ಹಾಗೂ ಕುತ್ತಿಗೆ ಭಾಗಕ್ಕೆ ಕೊಚ್ಚಿ ಭೀಕರವಾಗಿ ಕೊಲೆ ಮಾಡಿದ್ದಾರೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ತನಿಖೆ ಕೈಗೊಂಡ ಪೊಲೀಸರು ಕೊಲೆ ಮಾಡಿದ ಆರೋಪಿಗಳನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.


Spread the love

About Laxminews 24x7

Check Also

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the loveವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ