Breaking News

ವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆ

Spread the love

ವಿಜಯಪುರ: ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ  6 ಜನರ ಶವಗಳು ಪತ್ತೆಯಾಗಿದ್ದು, ಕೌಟುಂಬಿಕ ಕಲಹಕ್ಕೆ ಕುಟುಂಬವೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ತಾಯಿ ಶೋಭಾ ಜಾಲಗೇರಿ (45), ವಿದ್ಯಾ (16), ಸುವರ್ಣ (14), ಗೌಡೇಶ್ (ಮೂಗ) (10), ವಿಕಾಸ (5) ಸಾನಿಕಾ (7) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ.

ಆ.23ರಂದು ಗಂಡ ಮಲಕಾರಿ ಜೊತೆ ಶೋಭಾ ಜಗಳವಾಗಿತ್ತು. ಈ ವೇಳೆ ಆತ್ಮಹತ್ಯೆ ಮಾಡಿಕೊಳ್ಳೋದಾಗಿ ಹೇಳಿ ಮನೆಯಿಂದ ಹೊರಟಿದ್ದರು. ಆನಂತರ ಆ.24ರಂದು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮಿಸ್ಸಿಂಗ್ ಕೇಸ್ ದಾಖಲಾಗಿತ್ತು. ಇದಾದ ನಂತರ ಇಂದು (ಆ.26) ಭೂತನಾಳ ಕೆರೆಯಲ್ಲಿ 6 ಜನರ ಶವ ಪತ್ತೆಯಾಗಿವೆ. ಬೆಳಿಗ್ಗೆ ವಾಯುವಿಹಾರಕ್ಕಾಗಿ ಬಂದಿದ್ದ ಸಂತೋಷ ಎಂಬುವವರು ಶವಗಳನ್ನ ನೋಡಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕೆ ಎಸ್ಪಿ ಲಕ್ಷ್ಮಣ ನಿಂಬರಗಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಪ್ರಾಥಮಿಕ ವರದಿ ಪ್ರಕಾರ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಈ ಸಂಬಂಧ ಆದರ್ಶ ನಗರ ಪೊಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಸಾಮಾಜಿಕ ಜಾಲತಾಣಗಳ ಮೇಲೆ ಖಾಕಿ ಕಣ್ಣು, ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣ ಕ್ರಮ: ಚಾ.ನಗರ ಎಸ್‌ಪಿ ಎಚ್ಚರಿಕೆ

Spread the loveಚಾಮರಾಜನಗರ: ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುಳ್ಳು ಸುದ್ದಿ, ಪ್ರಚೋದನಕಾರಿ ಪೋಸ್ಟ್‌ಗಳ ವಿರುದ್ಧ ಚಾಮರಾಜನಗರ ಜಿಲ್ಲಾ ಪೊಲೀಸ್ ಇಲಾಖೆ ಕಠಿಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ