ಚಾಮರಾಜನಗರ: ಡೆತ್ ನೋಟ್ ( ಬರೆದಿಟ್ಟು ಕೆರೆಗೆ ಹಾರಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಬೆಂಡರವಾಡಿ ಗ್ರಾಮದಲ್ಲಿ ನಡೆದಿದೆ.
ಗುರುಮೂರ್ತಿ ಮೃತಪಟ್ಟ ಯುವಕ. ನಾಲ್ವರು ಬಂದು ಗಲಾಟೆ ನಡೆಸಿ ಅವಮಾನಿಸಿದ್ದೆ ಸಾವಿಗೆ ಕಾರಣ ಎಂದು ಡೆತ್ ನೋಟ್‌ನಲ್ಲಿ ಉಲ್ಲೇಖಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸದ್ಯ ಅಗ್ನಿಶಾಮಕ ಸಿಬ್ಬಂದಿ ಶೋಧ ಕಾರ್ಯ ನಡೆಸಿ ಕೆರೆಯಿಂದ ಶವ ಹೊರತೆಗೆದಿದ್ದಾರೆ. ಘಟನೆ ಸಂಬಂಧ ಶ್ರವಣ, ಅಭಿ ಎಂಬುವವರ ವಿರುದ್ಧ ಕುಟುಂಬಸ್ಥರು ದೂರು ನೀಡಿದ್ದಾರೆ. ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Laxmi News 24×7