ಲಕ್ನೋ: ಅಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ದಿನಾಂಕ ನಿಗದಿಯಾಗಿದ್ದು, ಭರ್ಜರಿ ಸಿದ್ಧತೆಗಳು ಆರಂಭವಾಗಿದೆ. ಲಾಕ್‍ಡೌನ್ ನಡುವೆ ಐತಿಹಾಸಿಕ ಕಾರ್ಯಕ್ರಮ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
ಇಂದು ಸಿಎಂ ಯೋಗಿ ಆದಿತ್ಯನಾಥ್ ಅಯೋಧ್ಯೆಗೆ ಭೇಟಿ ನೀಡಿ ಸಿದ್ಧತೆಗಳನ್ನು ಪರಿಶೀಲನೆ ನಡೆಸಿ ಸಲಹೆಗಳನ್ನು ನೀಡಿದರು. ವಿಶ್ವ ಹಿಂದೂ ಪರಿಷತ್ ಕಾರ್ಯಕ್ರಮದ ಸಿದ್ಧತೆಯ ನೇತೃತ್ವ ವಹಿಸಿಕೊಂಡಿದೆ. ಅಗಸ್ಟ್ ಐದರಂದು ಬೆಳಗ್ಗೆ 10:30 ರಿಂದ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಲಿದ್ದಾರೆ.
ಕಾರ್ಯಕ್ರಮದಲ್ಲಿ 300 ಮಂದಿ ಅತಿಥಿಗಳು ಭಾಗಿಯಾಗಲಿದ್ದು ಈ ಪೈಕಿ ಈಗಾಗಲೇ, 200 ಮಂದಿಗೆ ಆಹ್ವಾನ ನೀಡಲಾಗಿದೆ ಎಂದು ವಿಶ್ವ ಹಿಂದೂ ಪರಿಷತ್ ಹೇಳಿದೆ. ಅಯೋಧ್ಯೆಯ ಜನರು ಶಿಲನ್ಯಾಸ ಕಾರ್ಯಕ್ರಮ ವಿಕ್ಷೀಸಲು ಅಲ್ಲಲ್ಲಿ ಎಲ್‍ಇಡಿ ವ್ಯವಸ್ಥೆ ಮಾಡಿದ್ದು, ಲಾಕ್‍ಡೌನ್ ನಿಯಮಗಳೊಂದಿಗೆ ವೀಕ್ಷಿಸಲು ವ್ಯವಸ್ಥೆ ಮಾಡಲಾಗುತ್ತಿದೆ.
ಶಿಲನ್ಯಾಸದ ಬಳಿಕ ಅಯೋಧ್ಯೆಯ ಪ್ರತಿ ಮನೆಯಲ್ಲೂ ದೀಪ ಬೆಳಗಿಸುವ ಕಾರ್ಯಕ್ರಮಕ್ಕೆ ಚಿಂತಿಸಿದೆ. ರಾಮ ವನವಾಸ ಮುಗಿಸಿ ಬಂದಾಗ ದೀಪಾವಳಿ ಆಚರಿಸಿಲಾಗಿತ್ತು. ಸುದೀರ್ಘ ಕಾನೂನು ಹೋರಾಟ ಬಳಿಕ ಮಂದಿರ ನಿರ್ಮಾಣವಾಗುತ್ತಿದ್ದು ಐತಿಹಾಸಿಕವಾಗಿ ಆಚರಿಸಲು ಯೋಜನೆ ರೂಪಿಸಲಾಗುತ್ತಿದೆ.