ಯಾದಗಿರಿ: ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಇಬ್ಬರು ಶಿಕ್ಷಕರನ್ನು ಅಮಾನತು ಮಾಡಿರುವ ಘಟನೆ ಯಾದಗಿರಿಯಲ್ಲಿ ನಡೆದಿದೆ.
ಹುಣಸಗಿಯ ಸರಕಾರಿ ಬಾಲಕಿಯರ ಪ್ರೌಢ ಶಾಲೆಯ ಶಿಕ್ಷಕ ಗುರುರಾಜ್ ಜೋಷಿ ಹಾಗೂ ಕುಪ್ಪಿಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಅಣ್ಣಾ ಸಾಹೇಬ್ ದೇಶಮುಖ ಅಮಾನತಾದ ಶಿಕ್ಷಕರು. ಅಣ್ಣಾ ಸಾಹೇಬ್ ಕಳೆದ ವರ್ಷ ಅಕ್ಟೋಬರ್ 10ರಂದು ಹುಣಸಗಿಯಲ್ಲಿ ಹಮ್ಮಿಕೊಂಡ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದರು. ಕಳೆದ ವರ್ಷ ಅಕ್ಟೋಬರ್ 12ರಂದು ಗುರುರಾಜ್ ಜೋಷಿ ವಿಜಯಪುರ ಜಿಲ್ಲೆಯ ತಾಳಿಕೋಟೆಯಲ್ಲಿ ಹಮ್ಮಿಕೊಂಡ ಆರ್ಎಸ್ಎಸ್ ಪಥಸಂಚನದಲ್ಲಿ ಭಾಗಿಯಾಗಿದ್ದರು. ಶಿಕ್ಷಕರಿಬ್ಬರು ಕರ್ನಾಟಕ ನಾಗರಿಕ ಸೇವಾ ನಿಯಮ ಉಲ್ಲಂಘನೆ ಹಿನ್ನೆಲೆ ಅಮಾನತು ಮಾಡಲಾಗಿದೆ.
ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಜಿಲ್ಲಾಧ್ಯಕ್ಷ ಜುಮ್ಮಣ್ಣ ಗುಡಿಮನಿ ಅವರ ದೂರಿನ ಅನ್ವಯ ತನಿಖೆ ನಡೆಸಿ ಯಾದಗಿರಿ ಶಾಲಾ ಶಿಕ್ಷಣ ಇಲಾಖೆಯ ಡಿಡಿಪಿಐ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
Laxmi News 24×7