Breaking News

ದರ್ಶನ್‌ಗೆ ಸಂಕಷ್ಟ ಫಿಕ್ಸ್‌ – ಪ್ರದೋಷ್ ಮಾಫಿ ಸಾಕ್ಷಿಗೆ ಮುಹೂರ್ತ ಫಿಕ್ಸ್!

Spread the love

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್‌ಗೆ  ಸಂಕಷ್ಟ ಎದುರಾಗುವ ಕಾಲ ಸನ್ನಿಹಿತವಾದಂತಿದೆ. ಆರೋಪಿ ಪ್ರದೋಷ್‌ ಮಾಫಿ ಸಾಕ್ಷಿ ನುಡಿಯಲು ಕೋರ್ಟ್‌ ಕೊನೆಗೂ ಮುಹೂರ್ತ ಫಿಕ್ಸ್‌ ಮಾಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದ  ಸಾಕ್ಷ್ಯ ನೀಡುವಂತೆ 59ನೇ ಸಿಸಿಹೆಚ್ ಕೋರ್ಟ್‌ ಪ್ರದೋಷ್‌ಗೆ ವಿಟ್ನೆಸ್ ಸಮನ್ಸ್ ಜಾರಿಗೊಳಿಸಿದೆ.

ಪ್ರಕರಣದ ವಿಚಾರಣೆ ವೇಳೆ ವಿಶೇಷ ಸರ್ಕಾರಿ ಅಭಿಯೋಜಕ ಪ್ರಸನ್ನ ಕುಮಾರ್, ಪ್ರದೋಷ್‌ಗೆ ವಿಟ್ನೆಸ್‌ ಸಮನ್ಸ್‌ ಜಾರಿಗೊಳಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು. ಮನವಿಯನ್ನ ಪರಿಗಣಿಸಿದ ನ್ಯಾಯಾಲಯ ಸಮನ್ಸ್‌ ಜಾರಿಗೊಳಿಸಲು ಆದೇಶಿಸಿದೆ.

ಪ್ರದೋಷ್‌ಗೆ ಸಮನ್ಸ್‌ ಜಾರಿಗೊಳಿಸಿ, ಅವರನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಜೈಲು ಅಧಿಕಾರಿಗಳಿಗೆ 59ನೇ ಸಿಸಿಹೆಚ್‌ ನ್ಯಾಯಾಲಯ ಸೂಚನೆ ನೀಡಿದೆ. 59ನೇ ಸಿಸಿಹೆಚ್‌ ನ್ಯಾಯಾಧೀಶೆ ಸುಜಾತಾ ಮಡಿವಾಳಪ್ಪ ಸಾಂಬ್ರಾಣಿ ಅವರು ಈ ಸೂಚನೆ ನೀಡಿದ್ದಾರೆ.

ಪ್ರದೋಷ್‌ ಮಾಫಿ ಸಾಕ್ಷಿ ಅರ್ಜಿಯನ್ನ ಕೋರ್ಟ್‌ ಇತ್ತೀಚೆಗಷ್ಟೇ ಅಂಗೀಕರಿಸಿತು. ಪ್ರದೋಷ್‌ ಮಾಫಿ ಸಾಕ್ಷಿಗೆ ಒಪ್ಪಿಗೆ ನೀಡಿ ಸಿಸಿಹೆಚ್‌ 42 ಕೋರ್ಟ್‌ ನ್ಯಾಯಾಧೀಶರು ಆದೇಶ ಹೊರಿಡಿಸಿದ್ರು. ಗೊತ್ತಿರುವ ಎಲ್ಲಾ ಸತ್ಯವನ್ನು ಕೋರ್ಟ್ ಮುಂದೆ ಹೇಳಬೇಕು. ಸುಳ್ಳು ನುಡಿದರೆ ಪ್ರಾಸಿಕ್ಯೂಷನ್ ತೀರ್ಮಾನ ತೆಗೆದುಕೊಳ್ಳುವ ಅವಕಾಶ ಇದೆ.

ಪ್ರಕರಣದ 14ನೇ ಆರೋಪಿಯಾಗಿದ್ದ ಪ್ರದೋಷ್‌ ಅಪ್ರೂವರ್‌ ಆಗಿ ಸಾಕ್ಷಿಯಾದ ಹಿನ್ನೆಲೆ ಪ್ರಕರಣದ ಉಳಿದ 16 ಮಂದಿಗೆ ಸಂಕಷ್ಟ ಎದುರಾಗಿದೆ. ದರ್ಶನ್‌ ಮತ್ತು ಗ್ಯಾಂಗ್‌ ವಿರುದ್ಧ ಪ್ರದೋಷ್‌ ಸಾಕ್ಷ್ಯ ನುಡಿಯಲಿದ್ದಾರೆ.


Spread the love

About Laxminews 24x7

Check Also

ರಾತ್ರಿ ಹೊತ್ತು ಗ್ರಾಮಕ್ಕೆ ನುಗ್ಗಿ ಕುರಿ, ನಾಯಿ ಹೊತ್ತೊಯ್ಯುತ್ತಿದ್ದ ಚಿರತೆ ಸೆರೆ; ನಿಟ್ಟುಸಿರು ಬಿಟ್ಟ ಜನ

Spread the loveಹಾಸನ: ಜಿಲ್ಲೆಯ ಆಲೂರು ತಾಲ್ಲೂಕಿನ ಕದಾಳು ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಉಪಟಳ ನೀಡುತ್ತಿದ್ದ ಚಿರತೆ ಕೊನೆಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ