Breaking News

ಹೆಂಡತಿ ಮೇಲಿನ ಕೋಪಕ್ಕೆ ಮಗುವನ್ನು ನದಿಗೆಸೆದು ಕೊಂದ ಪಾಪಿ ತಂದೆ

Spread the love

ಕಲಬುರಗಿ: ಹೆಂಡತಿ ಮೇಲಿನ ಸಿಟ್ಟಿಗೆ ವ್ಯಕ್ತಿಯೊಬ್ಬ 4 ವರ್ಷದ ಮಗುವನ್ನು ನದಿಗೆ ಎಸೆದು ಹತ್ಯೆ ಮಾಡಿದ ಘಟನೆ ಚಿಂಚೋಳಿ ತಾಲೂಕಿನ ಹಸರಗುಂಡಗಿ ಗ್ರಾಮದಲ್ಲಿ ನಡೆದಿದೆ.

ಸೋಮರಾವ್ ಹೂಗಾರ್ ಮಗುವನ್ನು ಹತ್ಯೆಗೈದ ಆರೋಪಿಯಾಗಿದ್ದಾನೆ. ಈತ ಪತ್ನಿ ಕಲ್ಪನಾ ಜೊತೆ ಗಲಾಟೆ ಮಾಡಿಕೊಂಡಿದ್ದ. ಇದೇ ಸಿಟ್ಟಲ್ಲಿ ಕೆಲಕಾಲ ಮಗು ಗುಂಡೇಶ್‌ನನ್ನು ಎತ್ತಿಕೊಂಡು ಆಟವಾಡಿಸುತ್ತಾ ಕರೆದುಕೊಂಡು ಹೋಗಿ ನಾಗರಾಳ ಜಲಾಶಯಕ್ಕೆ ಎಸೆದಿದ್ದಾನೆ.

ಈ ವಿಷಯ ತಿಳಿದ ಬಳಿಕ ಗಂಡನ ವಿರುದ್ಧ ಪತ್ನಿ ಕಲ್ಪನಾ ದೂರು ದಾಖಲಿಸಿದ್ದಾಳೆ. ಬಳಿಕ ಪೊಲೀಸರು ಮಗುವಿನ ಮೃತದೇಹವನ್ನು ಜಲಾಶಯದಿಂದ ಹೊರತೆಗೆದಿದ್ದಾರೆ. ಈ ಕುರಿತು ಚಿಂಚೋಳಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.


Spread the love

About Laxminews 24x7

Check Also

ರಾತ್ರಿ ಹೊತ್ತು ಗ್ರಾಮಕ್ಕೆ ನುಗ್ಗಿ ಕುರಿ, ನಾಯಿ ಹೊತ್ತೊಯ್ಯುತ್ತಿದ್ದ ಚಿರತೆ ಸೆರೆ; ನಿಟ್ಟುಸಿರು ಬಿಟ್ಟ ಜನ

Spread the loveಹಾಸನ: ಜಿಲ್ಲೆಯ ಆಲೂರು ತಾಲ್ಲೂಕಿನ ಕದಾಳು ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಉಪಟಳ ನೀಡುತ್ತಿದ್ದ ಚಿರತೆ ಕೊನೆಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ