Breaking News

ಸಾಕು ನಾಯಿಯನ್ನು ಕಚ್ಚಿದ ಬೀದಿನಾಯಿಗೆ ಗುಂಡಿಕ್ಕಿ ಹತ್ಯೆ – ಆರೋಪಿ ಅರೆಸ್ಟ್‌

Spread the love

ಶಿವಮೊಗ್ಗ: ತಾನು ಸಾಕಿದ ನಾಯಿಯನ್ನ ಕಚ್ಚಿದೆ ಎಂಬ ಕಾರಣಕ್ಕೆ ವ್ಯಕ್ತಿಯೊಬ್ಬ ಬೀದಿ ನಾಯಿಯನ್ನು ಗುಂಡಿಟ್ಟು ಹತ್ಯೆ ಮಾಡಿದ ಘಟನೆ ಸಾಗರ ತಾಲೂಕಿನ ನಾಡವಳ್ಳಿ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಲಿಂಗಮೂರ್ತಿ ನಾಯಿಯನ್ನು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ. ಗ್ರಾಮದ ಬೋರಪ್ಪ ಎಂಬವರು ಪ್ರತಿನಿತ್ಯ ದನ ಮೇಯಿಸಲು ತೆರಳುತ್ತಿದ್ದ ವೇಳೆ ಅವರೊಂದಿಗೆ ಬೀದಿ ನಾಯಿಯೊಂದು ಹಿಂಬಾಲಿಸಿ ಬರುತ್ತಿತ್ತು. ಅದೇ ನಾಯಿ ಗ್ರಾಮದ ಲಿಂಗಮೂರ್ತಿಯ ಮನೆ ಬಳಿ ಬಂದಾಗ ಅಲ್ಲಿದ್ದ ಸಾಕು ನಾಯಿಗಳನ್ನು ಕಚ್ಚಿತ್ತು. ಇದರಿಂದ ಕೋಪಗೊಂಡಿದ್ದ ಆರೋಪಿ ನಾಯಿಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ.

ಆರೋಪಿ ವಿರುದ್ಧ ಬಿಎನ್‌ಎಸ್ ಹಾಗೂ ಶಸ್ತ್ರಾಸ್ತ್ರ ಕಾಯ್ದೆಯಡಿ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿ, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ರಾತ್ರಿ ಹೊತ್ತು ಗ್ರಾಮಕ್ಕೆ ನುಗ್ಗಿ ಕುರಿ, ನಾಯಿ ಹೊತ್ತೊಯ್ಯುತ್ತಿದ್ದ ಚಿರತೆ ಸೆರೆ; ನಿಟ್ಟುಸಿರು ಬಿಟ್ಟ ಜನ

Spread the loveಹಾಸನ: ಜಿಲ್ಲೆಯ ಆಲೂರು ತಾಲ್ಲೂಕಿನ ಕದಾಳು ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಉಪಟಳ ನೀಡುತ್ತಿದ್ದ ಚಿರತೆ ಕೊನೆಗೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ