Breaking News

ರಾತ್ರಿ ಹೊತ್ತು ಗ್ರಾಮಕ್ಕೆ ನುಗ್ಗಿ ಕುರಿ, ನಾಯಿ ಹೊತ್ತೊಯ್ಯುತ್ತಿದ್ದ ಚಿರತೆ ಸೆರೆ; ನಿಟ್ಟುಸಿರು ಬಿಟ್ಟ ಜನ

Spread the love

ಹಾಸನ: ಜಿಲ್ಲೆಯ ಆಲೂರು ತಾಲ್ಲೂಕಿನ ಕದಾಳು ಗ್ರಾಮದಲ್ಲಿ ಕಳೆದ ಒಂದು ತಿಂಗಳಿನಿಂದ ಉಪಟಳ ನೀಡುತ್ತಿದ್ದ ಚಿರತೆ ಕೊನೆಗೂ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ.

ಕಳೆದ ಹಲವು ದಿನಗಳಿಂದ ಗ್ರಾಮದೊಳಗೆ ಓಡಾಡುತ್ತಿದ್ದ ಚಿರತೆ ಕುರಿ ಹಾಗೂ ನಾಯಿಗಳನ್ನು ಹೊತ್ತೊಯ್ದು ತಿಂದು ಹಾಕುತ್ತಿತ್ತು. ಇದರಿಂದ ಗ್ರಾಮಸ್ಥರು ಆತಂಕಗೊಂಡಿದ್ದರು. ಅಲ್ಲದೆ, ರಘು ಎಂಬುವವರ ಮನೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಚಿರತೆ ಗ್ರಾಮದೊಳಗೆ ಓಡಾಡುತ್ತಿದ್ದ ದೃಶ್ಯವೂ ಸೆರೆಯಾಗಿತ್ತು.

ಚಿರತೆ ಹಾವಳಿಯಿಂದ ಭಯಭೀತರಾಗಿದ್ದ ಸ್ಥಳೀಯರು, ಕೂಡಲೇ ಚಿರತೆಯನ್ನ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಒತ್ತಾಯಿಸಿದ್ದರು. ಗ್ರಾಮಸ್ಥರ ಮನವಿಗೆ ಸ್ಪಂದಿಸಿದ ಅರಣ್ಯ ಇಲಾಖೆ ನಿನ್ನೆ ಚಿರತೆ ಸೆರೆಗೆ ಬೋನನ್ನು ಇರಿಸಿತ್ತು.

ಇಂದು ಬೆಳಗ್ಗೆ ಅಂದಾಜು ಮೂರು ವರ್ಷದ ಹೆಣ್ಣು ಚಿರತೆ ಬೋನಿಗೆ ಬಿದ್ದಿದೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸೆರೆ ಸಿಕ್ಕಿರುವ ಚಿರತೆಯನ್ನು ಸುರಕ್ಷಿತವಾಗಿ ಬೇರೆಡೆಗೆ ಸ್ಥಳಾಂತರಿಸಲು ಅರಣ್ಯ ಇಲಾಖೆ ಮುಂದಾಗಿದೆ. ಚಿರತೆ ಸೆರೆ ಸಿಕ್ಕ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಆತಂಕದಲ್ಲಿದ್ದ ಕದಾಳು ಗ್ರಾಮದ ಗ್ರಾಮಸ್ಥರು ಇದೀಗ ನಿಟ್ಟುಸಿರು ಬಿಟ್ಟಿದ್ದಾರೆ.


Spread the love

About Laxminews 24x7

Check Also

ಹನೂರು ಎನ್‌ಕೌಂಟರ್ ಪ್ರಕರಣ – ಸರ್ಕಾರಕ್ಕೆ ಮ್ಯಾಜಿಸ್ಟ್ರೇಟ್ ತನಿಖಾ ವರದಿ ಸಲ್ಲಿಕೆ

Spread the loveಬೆಂಗಳೂರು: ಹನೂರಿನ ಕಾವೇರಿ ವನ್ಯಧಾಮದಲ್ಲಿ ನಡೆದ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಮ್ಯಾಜಿಸ್ಟ್ರೇಟ್ ತನಿಖಾ ವರದಿ ಸಲ್ಲಿಕೆಯಾಗಿದೆ.‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ