ರಾಮನಗರ: ಮಾಗಡಿ ತಾಲೂಕಿನಲ್ಲಿ ಸರಣಿ ಕಳ್ಳತನ ನಡೆಸಿ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದ ಮೂವರು ಖದೀಮರನ್ನು ಬಂಧಿಸುವಲ್ಲಿ ಮಾಗಡಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಬಂಧಿತರಿಂದ ಸುಮಾರು 20.5 ಲಕ್ಷ ರೂ. ಮೌಲ್ಯದ ಚಿನ್ನ-ಬೆಳ್ಳಿ ಆಭರಣ ಹಾಗೂ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಆಗಸ್ಟ್ 7ರಂದು ಮಾಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗೇರಹಳ್ಳಿ ಗ್ರಾಮದಲ್ಲಿ ಅಪರಿಚಿತರು ಮನೆಗೆ ನುಗ್ಗಿ, ನಿದ್ರಿಸುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದರು. ಅದೇ ದಿನ ಗೇರಹಳ್ಳಿ ಗ್ರಾಮದ ದೇವಸ್ಥಾನವೊಂದರಲ್ಲಿ ಹಾಗೂ ಬೈಚಾಪುರ ಗ್ರಾಮದ ಮನೆಯೊಂದರಲ್ಲೂ ಕಳ್ಳತನ ಎಸಗಿದ್ದರು. ಈ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ಒಟ್ಟು 3 ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು.
ಪ್ರಕರಣ ಕುರಿತು ಕಾರ್ಯಾಚರಣೆಗಿಳಿದ ಮಾಗಡಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿಗಳಿಂದ ಒಟ್ಟು 20,50,000 ಮೌಲ್ಯದ ವಸ್ತುಗಳನ್ನ ಜಪ್ತಿ ಮಾಡಲಾಗಿದೆ. 78 ಗ್ರಾಂ ಚಿನ್ನಾಭರಣ, 2.55 ಕೆಜಿ ಬೆಳ್ಳಿ, 6 ದ್ವಿಚಕ್ರ ವಾಹನ, ಹಿತ್ತಾಳೆ ಪಾತ್ರೆ, ಕೃತ್ಯಕ್ಕೆ ಬಳಸಿದ್ದ 1 ಕಾರು, 1 ಬೊಲೆರೊ ವಾಹನ ವಶಕ್ಕೆ ಪಡೆಯಲಾಗಿದೆ.
Laxmi News 24×7