Breaking News

ರೈಲಿನಲ್ಲಿ ಮಹಿಳೆಯ ಅರೆಬೆತ್ತಲೆ ಶವ ಪತ್ತೆ – ಅತ್ಯಾಚಾರ ಎಸಗಿ ಕೊಲೆ ಶಂಕೆ

Spread the love

ಧಾರವಾಡ: ಸೋಲ್ಲಾಪುರದಿಂದ ಧಾರವಾಡಕ್ಕೆ  ಬಂದಿದ್ದ ರೈಲಿನಲ್ಲಿ ಅರೆಬೆತ್ತಲೆ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ.

ಕಳೆದ ರಾತ್ರಿ ಮಹಾರಾಷ್ಟ್ರದ ಸೊಲ್ಲಾಪೂರದಿಂದ ಹೊರಟಿದ್ದ ರೈಲು ಬೆಳಗ್ಗೆ ಧಾರವಾಡ ತಲುಪಿತ್ತು. ಈ ರೈಲಿನಲ್ಲಿ ರಾತ್ರಿ ಸಮಯದಲ್ಲಿ ಮಹಿಳೆಯ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಬೆಳಗ್ಗೆ ರೈಲ್ವೆ ಸಿಬ್ಬಂದಿ ಬೋಗಿ ಸ್ವಚ್ಛ ಮಾಡಲು ಬಂದಾಗ ಶವ ಸಿಬ್ಬಂದಿ ಕಣ್ಣಿಗೆ ಬಿದ್ದಿದೆ.

ಬಳಿಕ ಸಿಬ್ಬಂದಿ ರೇಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮೃತ ಮಹಿಳೆ ಯಾರು ಎಂದು ಗೊತ್ತಾಗಿಲ್ಲ. ಸದ್ಯ ಸ್ಥಳಕ್ಕೆ ಭೇಟಿ ನೀಡಿದ ರೇಲ್ವೆ ಪೊಲೀಸರು ಮತ್ತು ಧಾರವಾಡ ವಿದ್ಯಾಗಿರಿ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ.

ಕಳೆದ ರಾತ್ರಿಯೇ ರೈಲು ಬರುವಾಗಲೇ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ರೈಲಿನ ಕೊನೆಯಲ್ಲಿ ಇರುವ ಮಹಿಳಾ ಬೋಗಿಯಲ್ಲಿ‌ ಈ ಶವ ಪತ್ತೆಯಾಗಿದೆ. ಸದ್ಯ ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.


Spread the love

About Laxminews 24x7

Check Also

ಬಂಡೆ ತಬ್ಬಿ ಬೆಂಗಳೂರಿಗರ ಪ್ರತಿಭಟನೆ – ಲಾಲ್‌ಬಾಗ್‌ ಉಳಿಸಲು ಬೃಹತ್‌ ಅಭಿಯಾನ

Spread the loveಬೆಂಗಳೂರು: ಉದ್ಯಾನವನಗಳ ಶೇ.5ರಷ್ಟು ಜಾಗವನ್ನು ಅನ್ಯ ಉದ್ದೇಶಗಳಿಗೆ ಬಳಸಲು ಅವಕಾಶ ಕಲ್ಪಿಸುವ ಸರ್ಕಾರದ ಕಾಯ್ದೆ ತಿದ್ದುಪಡಿಗೆ ಬೆಂಗಳೂರಿನಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ