Breaking News

ಸುಪಾರಿ ಕೊಟ್ಟು ಪತಿಯ ಹತ್ಯೆ – ಪತ್ನಿ, ಪ್ರಿಯಕರ ಸೇರಿ ಮೂವರು ಅರೆಸ್ಟ್‌

Spread the love

ದಾವಣಗೆರೆ: ಮಹಿಳೆಯೊಬ್ಬಳು ಪ್ರಿಯಕರನ  ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿಸಿದ ಘಟನೆ ಜಗಳೂರಿನ ದೊಣೆಹಳ್ಳಿ ಹೊಸೂರು ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಬಸವರಾಜ್ (37) ಕೊಲೆಯಾದ ವ್ಯಕ್ತಿ. ಪತ್ನಿ ಸುನೀತಾ ಹಾಗೂ ಪ್ರಿಯಕರ ಬೆಣ್ಣೆಹಳ್ಳಿ ತಿಪ್ಪೇಸ್ವಾಮಿ ಹತ್ಯೆ ಆರೋಪಿಗಳಾಗಿದ್ದಾರೆ. ತಿಪ್ಪೇಸ್ವಾಮಿ ಜೊತೆ ಪತ್ನಿಯ ಅಕ್ರಮ ಸಂಬಂಧದ ವಿಚಾರ ತಿಳಿದು ಪತಿ ಮನೆಯಲ್ಲಿ ಗಲಾಟೆ ಮಾಡಿದ್ದ. ಇದೇ ವಿಚಾರಕ್ಕೆ ಇಬ್ಬರು ಸೇರಿ ಹಂತಕರಿಗೆ 2 ಲಕ್ಷ ರೂ. ಸುಪಾರಿ ಕೊಟ್ಟು ಕೊಲೆ ಮಾಡಿಸಿದ್ದಾರೆ ಎಂದು ತನಿಖೆ ವೇಳೆ ತಿಳಿದುಬಂದಿದೆ.
ಬಸವರಾಜ್‌ಗೆ ಸಾಲ ಕೊಡಿಸುವುದಾಗಿ ನಂಬಿಸಿ ದೊಣೆಹಳ್ಳಿ ಕ್ರಾಸ್‌ನಿಂದ ಕಾರಿನಲ್ಲಿ ಆರೋಪಿಗಳು ಕರೆದೊಯ್ದಿದ್ದರು. ಬಳಿಕ ಕೊಲೆ ಮಾಡಿದ್ದರು. ಕೊಲೆಯ ನಂತರ ಗಂಡ ನಾಪತ್ತೆಯಾದ ಬಗ್ಗೆ ಮಹಿಳೆ ದೂರು ದಾಖಲಿಸಿದ್ದಳು.

ತಾಂತ್ರಿಕ ಮಾಹಿತಿ ಹಾಗೂ ವಿಚಾರಣೆ ನಂತರ ಪ್ರಕರಣ ಬಯಲಾಗಿದೆ. ಇದೆ ಕೃತ್ಯದಲ್ಲಿ ಭಾಗಿಯಾಗಿದ್ದ ಓಂಕಾರಪ್ಪ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನಾಪತ್ತೆಯಾಗಿರುವ ಮತ್ತಿಬ್ಬರು ಆರೋಪಿಗಳಿಗಾಗಿ ಜಗಳೂರು ಪೊಲೀಸರು ಬಲೆ ಬೀಸಿದ್ದಾರೆ.


Spread the love

About Laxminews 24x7

Check Also

ಚಾಕಲೇಟ್ ಕದ್ದಿದ್ದಕ್ಕೆ ಬಾಲಕನಿಗೆ ಮನಸೋ ಇಚ್ಛೆ ಹಲ್ಲೆ – ಆರೋಪಿ ಅರೆಸ್ಟ್‌

Spread the loveವಿಜಯಪುರ: ಜಿಲ್ಲೆಯಲ್ಲಿ ಚಾಕಲೇಟ್ ಕದ್ದಿದ್ದಕ್ಕೆ ಬಾಲಕನಿಗೆ ಥಳಿಸಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ವಿಜಯಪುರ ಜಿಲ್ಲೆಯ ಆಲಮೇಲ ತಾಲೂಕಿನ ಮಲಘಾಣ ಗ್ರಾಮದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ