ಬೆಂಗಳೂರು: ರಾಜಧಾನಿಯಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಆರೋಪದ ಮೇಲೆ ಬಂಧಿಸಲಾಗಿದ್ದ 31 ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ಗಡಿಪಾರು ಮಾಡುತ್ತಿದ್ದಾರೆ.
ಬೆಂಗಳೂರಿನ ವಿವಿಧ 10 ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಬಂಧಿಸಲಾಗಿದ್ದ ಇವರನ್ನು ಬಿಗಿ ಭದ್ರತೆಯೊಂದಿಗೆ ಪಶ್ಚಿಮ ಬಂಗಾಳದ ಗಡಿ ಭಾಗಕ್ಕೆ ಕರೆದೊಯ್ಯಲಾಗುತ್ತಿದೆ.
ಬೆಳ್ಳಂಬೆಳಗ್ಗೆಯೇ 31 ಮಂದಿಯನ್ನು ಪೊಲೀಸರು ಬೆಂಗಳೂರಿನ ಎಸ್ಎಂವಿಟಿ ರೈಲ್ವೆ ಟರ್ಮಿನಲ್ ಮೂಲಕ ರೈಲಿನಲ್ಲಿ ಕರೆದೊಯ್ದಿದ್ದಾರೆ. ಸುಮಾರು 20 ಪೊಲೀಸ್ ಸಿಬ್ಬಂದಿ ಭದ್ರತೆಯಲ್ಲಿ ಈ ಗಡಿಪಾರು ಪ್ರಕ್ರಿಯೆ ನಡೆಯುತ್ತಿದೆ.
ಪೊಲೀಸ್ ಸಿಬ್ಬಂದಿ ನಾಳೆ ಸಂಜೆ 5 ಗಂಟೆ ವೇಳೆಗೆ ಬಾಂಗ್ಲಾದೇಶದ ಗಡಿ ಸಮೀಪದ ಪಶ್ಚಿಮ ಬಂಗಾಳದ ಮಾಲ್ದಾ ತಲುಪುವ ನಿರೀಕ್ಷೆಯಿದೆ. ಅಲ್ಲಿಂದ ನಿಯಮಾನುಸಾರ ಮುಂದಿನ ಪ್ರಕ್ರಿಯೆ ನಡೆಸಲಾಗುತ್ತದೆ.
Laxmi News 24×7