Breaking News

ಒಂದೇ ದಿನ 830 ಕೋಳಿಗಳ ನಿಗೂಢ ಸಾವು – ದುಷ್ಕರ್ಮಿಗಳ ಕೈವಾಡದ ಶಂಕೆ

Spread the love

ದಾವಣಗೆರೆ: ಒಂದೇ ದಿನ ಇದ್ದಕ್ಕಿದ್ದಂತೆ 830 ನಾಟಿ ಕೋಳಿಗಳು ನಿಗೂಢವಾಗಿ ಸಾವನ್ನಪ್ಪಿದ ಘಟನೆ ದಾವಣಗೆರೆ ತಾಲೂಕಿನ ರಾಮಗೊಂಡನಹಳ್ಳಿಯಲ್ಲಿ ನಡೆದಿದೆ.

ಪ್ರಕಾಶ್ ಹಾಗೂ ಅರ್ಜುನ್ ಎಂಬ ರೈತರಿಗೆ ಸೇರಿದ ನಾಟಿ ಕೋಳಿ ಸಾವನ್ನಪ್ಪಿವೆ. ಕೋಳಿಗಳಿಗೆ ಯಾವುದೇ ರೋಗ ಕೂಡಾ ಇರಲಿಲ್ಲ. ಜೊತೆಗೆ ಆಹಾರ ನೀಡುವಲ್ಲಿ ವ್ಯತ್ಯಾಸ ಆಗಿಲ್ಲ. ಬೆಳಗಾಗುವಷ್ಟರಲ್ಲಿ ನೂರಾರು ಕೋಳಿಗಳ ಸಾವನ್ನಪ್ಪಿದ್ದು, ದುಷ್ಕರ್ಮಿಗಳ ಕೈವಾಡದ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪಶು ವೈದ್ಯಾಧಿಕಾರಿಗಳು ಮಾದರಿ ಸಂಗ್ರಹಿಸಿದ್ದು, ವರದಿಯಿಂದ ಸಾವಿಗೆ ನಿಖರ ಕಾರಣ ತಿಳಿಯಬೇಕಿದೆ.

ಕೋಳಿ ಸಾಕಿದ್ದ ರೈತ ಕುಟುಂಬಗಳಿಗೆ ಭಾರೀ ನಷ್ಟವಾಗಿದೆ. ಸೂಕ್ತ ಪರಿಹಾರ ನೀಡುವಂತೆ ರೈತರು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಬೈಕ್ ಟ್ಯಾಕ್ಸಿ ಹತ್ತಿ 29 ಕಿ.ಮೀ. ಸವಾರಿ – ಡ್ರಾಪ್ ಆದ್ಮೇಲೆ ದುಡ್ಡಿಲ್ಲ ಅಂತ ಯುವತಿ ಕಿರಿಕ್, ವಿಡಿಯೋ ವೈರಲ್

Spread the loveಬೆಂಗಳೂರು: ಬೈಕ್ ಟ್ಯಾಕ್ಸಿ  ಹತ್ತಿ 29 ಕಿ.ಮೀ. ಸವಾರಿ ಮಾಡಿ, ಬಳಿಕ ಡ್ರಾಪ್ ಮಾಡಿದಾಗ ಯುವತಿಯೊಬ್ಬರು ನನ್ನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ