Breaking News

ಬಳ್ಳಾರಿ ಚಲೋ’ಗೆ ಇಂದು ಚಾಲನೆ; ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಪಾದಯಾತ್ರೆ

Spread the love

ರಾಯಚೂರು: ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳನ್ನು ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆಯಲಿರುವ ʼಬಿಜೆಪಿ ಬಳ್ಳಾರಿ ಚಲೋʼ ಪಾದಯಾತ್ರೆಗೆ ಇಂದು ರಾಯಚೂರು ಜಿಲ್ಲೆಯ ಲಿಂಗಸುಗೂರಿನಲ್ಲಿ ಚಾಲನೆ ಸಿಗಲಿದೆ.

ಲಿಂಗಸುಗೂರಿನಲ್ಲಿ ಇಂದು ಬಹಿರಂಗ ಸಮಾವೇಶ ಮೂಲಕ ಹೋರಾಟ ಆರಂಭವಾಗಲಿದೆ. ಲಿಂಗಸುಗೂರಿನ ಬೆಂಗಳೂರು ಬೈಪಾಸ್ ರಸ್ತೆಯಲ್ಲಿ ಬೆಳಗ್ಗೆ 10:30ಕ್ಕೆ ಬಹಿರಂಗ ಸಮಾವೇಶ ನಡೆಯಲಿದ್ದು, ಮಧ್ಯಾಹ್ನ 1 ಗಂಟೆಗೆ ಪಾದಯಾತ್ರೆ ಆರಂಭವಾಗಲಿದೆ.

ಪಾದಯಾತ್ರೆಗೂ ಮುನ್ನ ಬಿ.ವೈ. ವಿಜಯೇಂದ್ರ ಸೇರಿದಂತೆ ಬಿಜೆಪಿ ನಾಯಕರು ಜಿಲ್ಲೆಯ ಐತಿಹಾಸಿಕ ಗುರುಗುಂಟಾ ಅಮರೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆಯಲಿದ್ದಾರೆ. ಬಳಿಕ ದೇವರಭೂಪುರ ಬೃಹನ್ಮಠದ ಗಜದಂಡೇಶ್ವರ ಶಿವಾಚಾರ್ಯರಿಂದ ಆಶೀರ್ವಾದ ಪಡೆಯಲಿದ್ದಾರೆ. ವಿಜಯೇಂದ್ರ ಅವರಿಗೆ ಹಲವು ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಸಾಥ್ ನೀಡಲಿದ್ದಾರೆ.

ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಆರ್. ಅಶೋಕ್, ಛಲವಾದಿ ನಾರಾಯಣಸ್ವಾಮಿ, ಜಗದೀಶ್ ಶೆಟ್ಟರ್, ಬಸವರಾಜ ಬೊಮ್ಮಾಯಿ, ಶ್ರೀರಾಮುಲು ಸೇರಿದಂತೆ ಹಲವು ಬಿಜೆಪಿ ನಾಯಕರು ಪಾದಯಾತ್ರೆಯಲ್ಲಿ ಭಾಗಿಯಾಗಲಿದ್ದಾರೆ.

ಇಂದು ಲಿಂಗಸುಗೂರಿನಿಂದ ಸಂತೆಕೆಲ್ಲೂರುವರೆಗೆ 12 ಕಿ.ಮೀ. ಪಾದಯಾತ್ರೆ ನಡೆಯಲಿದೆ. ಬಳಿಕ ಸಂತೆಕೆಲ್ಲೂರಿನ ಘನಮಠೇಶ್ವರ ಮಠದಲ್ಲಿ ಬಿಜೆಪಿ ನಾಯಕರು ರಾತ್ರಿ ವಾಸ್ತವ್ಯ ಮಾಡಲಿದ್ದಾರೆ.

ಸೆಪ್ಟೆಂಬರ್ 2ರಂದು ಸಂತೆಕೆಲ್ಲೂರಿನಿಂದ ಮಸ್ಕಿ ತಾಲೂಕಿನ ಗುಡುದೂರುವರೆಗೆ 21 ಕಿ.ಮೀ. ಪಾದಯಾತ್ರೆ ನಡೆಯಲಿದೆ. ಗುಡುದೂರಿನಲ್ಲಿ ಸಂಜೆ ವಿರಾಮ ಪಡೆದು ಮಸ್ಕಿಯಲ್ಲಿ ರಾತ್ರಿ ವಾಸ್ತವ್ಯ ಮಾಡಲಿದ್ದಾರೆ. ಸೆಪ್ಟೆಂಬರ್ 3ರಂದು ಗುಡುದೂರಿನಿಂದ ಸಿಂಧನೂರುವರೆಗೆ ಸುಮಾರು 20 ಕಿ.ಮೀ. ಪಾದಯಾತ್ರೆ ನಡೆಯಲಿದೆ.

ಸೆಪ್ಟೆಂಬರ್ 4ರಂದು ಸಿಂಧನೂರಿನಿಂದ ಕೊಪ್ಪಳ ಜಿಲ್ಲೆಯ ಕನಕಗಿರಿ ಕ್ಷೇತ್ರದ ಕಾರಟಗಿವರೆಗೆ 15 ಕಿ.ಮೀ. ಪಾದಯಾತ್ರೆ ನಡೆಯಲಿದೆ. ಇದರೊಂದಿಗೆ ರಾಯಚೂರು ಜಿಲ್ಲೆಯ ಲಿಂಗಸುಗೂರು, ಮಸ್ಕಿ ಹಾಗೂ ಸಿಂಧನೂರು ಕ್ಷೇತ್ರಗಳಲ್ಲಿ ಪಾದಯಾತ್ರೆ ಸಾಗಲಿದೆ.

ರಾಯಚೂರಿನಿಂದ ಆರಂಭವಾಗಲಿರುವ ಈ ಪಾದಯಾತ್ರೆ ಬಳಿಕ ಕಾರಟಗಿ ಮೂಲಕ ಕೊಪ್ಪಳ ಜಿಲ್ಲೆಯನ್ನು ಪ್ರವೇಶಿಸಲಿದೆ. ಪ್ರತಿ ಕ್ಷೇತ್ರದಿಂದ ಸುಮಾರು 10 ಸಾವಿರ ಕಾರ್ಯಕರ್ತರನ್ನು ಸೇರಿಸಲು ಬಿಜೆಪಿ ನಾಯಕರು ಸಿದ್ಧತೆ ನಡೆಸಿದ್ದಾರೆ.


Spread the love

About Laxminews 24x7

Check Also

ಬೆಂಗ್ಳೂರು ಏರ್‌ಪೋರ್ಟ್‌ ರಸ್ತೆಯಲ್ಲಿ ಸರಣಿ ಅಪಘಾತ – ತಪ್ಪಿದ ಭಾರೀ ಅನಾಹುತ

Spread the loveಬೆಂಗಳೂರು: ನಗರದ ಏರ್‌ಪೋರ್ಟ್‌ ರಸ್ತೆಯಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್‌ ಭಾರೀ ಅನಾಹುತವೊಂದು ತಪ್ಪಿದೆ. ಕಳೆದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ