Breaking News

ಬಸವರಾಜ್ ಹೇಳಿದಂತೆ ಕೆಲಸ ಮಾಡಿದ್ದೇನೆ – ಸಿಐಡಿ ಮುಂದೆ ಗ್ಯಾನೇಂದ್ರ ತಪ್ಪೊಪ್ಪಿಗೆ

Spread the love

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ  ಪಶುವೈದ್ಯಾಧಿಕಾರಿ ನೇಮಕ ಅಕ್ರಮ ಪ್ರಕರಣಕ್ಕೆ ತನಿಖೆ ತೀವ್ರಗೊಂಡಿದ್ದು, ಸಿಐಡಿ ಅಧಿಕಾರಿಗಳ ಮುಂದೆ ಐಎಎಸ್ ಅಧಿಕಾರಿ ಗ್ಯಾನೇಂದ್ರ ಹಗರಣದಲ್ಲಿನ ತಮ್ಮ ಪಾತ್ರದ ಬಗ್ಗೆ ಸ್ಫೋಟಕ ಸತ್ಯಗಳನ್ನು ಬಿಚ್ಚಿಟ್ಟಿದ್ದಾರೆ. ಮತ್ತೊಂದೆಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ಅಭ್ಯರ್ಥಿಗಳೇ ಸಾಕ್ಷಿಗಳಾಗಲು ಮುಂದಾಗಿದ್ದು ಕಿಂಗ್‌ಪಿನ್‌ಗಳಿಗೆ ಸಂಕಷ್ಟ ಎದುರಾಗಿದೆ.

ಈ ಇಡೀ ಹಗರಣಕ್ಕೆ ಬಸವರಾಜ್ ಕನ್ನಾಳಿ ಪ್ರಮುಖ ರೂವಾರಿ. ಆತ ಹೇಳಿದಂತೆಯೇ ನಾನು ಕೆಲಸ ಮಾಡಿದ್ದೇನೆ. ನಾನು ಯಾವುದೇ ಅಭ್ಯರ್ಥಿಗಳ ಜೊತೆ ನೇರವಾಗಿ ಮಾತನಾಡಿಲ್ಲ ಅಥವಾ ಮುಖಾಮುಖಿ ಭೇಟಿಗೆ ಅವಕಾಶ ನೀಡಿಲ್ಲ. ಅಭ್ಯರ್ಥಿಗಳನ್ನು ಸಂಪರ್ಕಿಸಿ ಡೀಲ್ ಕುದುರಿಸಿದ್ದೆಲ್ಲವೂ ಬಸವರಾಜ್ ಎಂದು ತಪ್ಪೊಪ್ಪಿಕೊಂಡಿದ್ದಾರೆ ಎಂದು ಮೂಲಗಳು  ತಿಳಿಸಿವೆ.

ಗ್ಯಾನೇಂದ್ರ ಹೇಳಿದ್ದೇನು?
ಬೀದರ್‌ನಿಂದಲೇ ಬಸವರಾಜ್ ಪರಿಚಯವಿದ್ದ. ಆತ ರಾಜಕಾರಣಿಯಂತೆ ಬಿಂಬಿಸಿಕೊಂಡಿದ್ದರಿಂದ ಆತನ ಮಾತನ್ನು ಸಂಪೂರ್ಣವಾಗಿ ನಂಬಿದ್ದೆ. ಜಯಮಹಲ್‌ನಲ್ಲಿರುವ ಮನೆ ಹಾಗೂ ನಗರದ ವಿವಿಧ ಹೋಟೆಲ್‌ಗಳಲ್ಲಿ ಭೇಟಿಯಾಗಿ ಡೀಲ್ ಕುರಿತು ಚರ್ಚೆ ನಡೆಸುತ್ತಿದ್ದೆವು.

ಪ್ರಿಂಟ್ ಆದ ಪ್ರಶ್ನೆ ಪತ್ರಿಕೆಯನ್ನು ನೇರವಾಗಿ ಹೊರಗೆ ತಂದಿಲ್ಲ. ಬದಲಾಗಿ, ಪ್ರಶ್ನೆ ಪತ್ರಿಕೆ ಪ್ರಿಂಟ್ ಆಗುವ ಮೊದಲೇ ಸುಮಾರು ಶೇ. 60ರಷ್ಟು ಪ್ರಶ್ನೆಗಳನ್ನು ಬರೆದುಕೊಳ್ಳಲಾಗಿತ್ತು. ನಾವು ಬರೆದುಕೊಂಡಿದ್ದ ಪ್ರಶ್ನೆಗಳ ಸರಣಿಗೇ ನಾನು ಪ್ರಿಂಟ್ ಹಾಕಲು ಅಂತಿಮ ಒಪ್ಪಿಗೆ ನೀಡಿದ್ದೆ ಎಂದು ಹೇಳಿದ್ದಾರೆ.

ಕಿಂಗ್‌ಪಿನ್ ಬಸವರಾಜ್ ಕನ್ನಾಳೆ ಮನೆ ಮೇಲೆ ದಾಳಿ ನಡೆಸಿದ ಸಿಐಡಿ ಅಧಿಕಾರಿಗಳಿಗೆ ಮಹತ್ವದ ಸಾಕ್ಷ್ಯಗಳು ಲಭ್ಯವಾಗಿವೆ. 6 ಅಭ್ಯರ್ಥಿಗಳ ಹಾಲ್ ಟಿಕೆಟ್‌ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಜೊತೆಗೆ 2025ರ ‘ಬಿ’ ಗ್ರೂಪ್ ಪರೀಕ್ಷೆಯ ಹಾಲ್ ಟಿಕೆಟ್‌ಗಳು ಕೂಡ ಪತ್ತೆಯಾಗಿದ್ದು ಸಿಐಡಿ ಅಧಿಕಾರಿಗಳು ಅವುಗಳನ್ನು ಜಪ್ತಿ ಮಾಡಿದ್ದಾರೆ. ಹಾಲ್ ಟಿಕೆಟ್ ಪತ್ತೆಯಾದ ಎಲ್ಲಾ ಅಭ್ಯರ್ಥಿಗಳಿಗೂ ವಿಚಾರಣೆಗೆ ಹಾಜರಾಗುವಂತೆ ಸಿಐಡಿ ನೋಟಿಸ್ ಜಾರಿ ಮಾಡಿದೆ.


Spread the love

About Laxminews 24x7

Check Also

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ – ವಿದ್ಯಾರ್ಥಿಗಳ ಮೇಲಿದ್ದ ಎಲ್ಲಾ ಎಫ್‌ಐಆರ್ ರದ್ದು

Spread the loveನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಶೈಕ್ಷಣಿಕ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಕಾಕ್ರೋಚ್ ಜನತಾ ಪಾರ್ಟಿ  ನೇತೃತ್ವದಲ್ಲಿ ಇತ್ತೀಚೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ