Breaking News

ದುನಿಯಾ ವಿಜಯ್ ಪುತ್ರನಿಂದ ಕಾಲೇಜ್‌ ವಿದ್ಯಾರ್ಥಿ ಕಿಡ್ನ್ಯಾಪ್, ಹಲ್ಲೆ – ದೂರು ದಾಖಲು

Spread the love

ಬೆಂಗಳೂರು: ಸ್ಯಾಂಡಲ್‌ವುಡ್ ಖ್ಯಾತ ನಟ ದುನಿಯಾ ವಿಜಯ್  ಅವರ ಪುತ್ರ ಸಾಮ್ರಾಟ್ ವಿಜಯ್ ವಿರುದ್ಧ ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಅಪಹರಿಸಿ ಕಾರಿನಲ್ಲೇ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಗಂಭೀರ ಆರೋಪ ಕೇಳಿಬಂದಿದೆ.

ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಸಾಮ್ರಾಟ್ ವಿಜಯ್ ಸೋಮವಾರ ಸ್ನೇಹಿತರೊಂದಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆ ಅದೇ ಕಾಲೇಜಿನ ವಿದ್ಯಾರ್ಥಿ ಮನೀಶ್ ಗೌಡ ಹಾಗೂ ಆತನ ಸ್ನೇಹಿತರು ಮತ್ತೊಂದು ಕಾರಿನಲ್ಲಿ ಸಾಮ್ರಾಟ್ ಕಾರನ್ನು ಓವರ್‌ಟೇಕ್ ಮಾಡಿ ರೇಗಿಸಿದ್ದಾರೆ.

ಈ ವಿಚಾರಕ್ಕೆ ಇಬ್ಬರ ನಡುವೆ ಕಿರಿಕ್ ಶುರುವಾಗಿದ್ದು, ಮನೀಶ್ ವಿರುದ್ಧ ಸಾಮ್ರಾಟ್ ವಿಜಯ್ ತೀವ್ರ ಆಕ್ರೋಶಗೊಂಡಿದ್ದರು. ಮಂಗಳವಾರ ಮಧ್ಯಾಹ್ನ ಸುಮಾರು 12 ಗಂಟೆಯ ಸುಮಾರಿಗೆ ಮನೀಶ್ ಗೌಡ ಆರ್‌ವಿ ಕಾಲೇಜು ಆವರಣದಲ್ಲಿ ತಮ್ಮ ಬೈಕ್ ಪಾರ್ಕ್ ಮಾಡುತ್ತಿದ್ದರು.

ಈ ವೇಳೆ ಬಿಳಿ ಬಣ್ಣದ ಸಫಾರಿ ಕಾರಿನಲ್ಲಿ ಗ್ಯಾಂಗ್ ಸಮೇತ ಬಂದ ಸಾಮ್ರಾಟ್ ವಿಜಯ್, ಮನೀಶ್‌ನನ್ನು ಬಲವಂತವಾಗಿ ಕಾರಿನೊಳಗೆ ಎಳೆದುಕೊಂಡು ಅಪಹರಿಸಿದ್ದಾರೆ. ಬಳಿಕ ಪಟ್ಟಣಗೆರೆಯ ಮುಖ್ಯ ರಸ್ತೆಯ ಕಡೆಗೆ ಕಾರನ್ನು ಚಲಾಯಿಸಿಕೊಂಡು ಹೋಗಿ, ಚಲಿಸುತ್ತಿದ್ದ ಕಾರಿನಲ್ಲೇ ಮನೀಶ್ ಮೇಲೆ ಮನಬಂದಂತೆ ಹಲ್ಲೆ ನಡೆಸಿದ್ದಾರೆ.

ಸಾಮ್ರಾಟ್ ವಿಜಯ್, ಸಮೃದ್ಧ್ ಸಿಂಹ, ವಿಶ್ವಾಸ್, ವೆಂಕಟೇಶ್, ಸಮೀದ್ ಸೇರಿದಂತೆ ಇತರರು ಸೇರಿ ಮನೀಶ್‌ನ ಮುಖ, ಕುತ್ತಿಗೆ, ಎದೆ ಹಾಗೂ ತಲೆಯ ಭಾಗಕ್ಕೆ ತೀವ್ರವಾಗಿ ಹಲ್ಲೆ ನಡೆಸಿ, ನಡುರಸ್ತೆಯಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

ಗಾಯಾಳು ಮನೀಶ್ ಗೌಡ ಕೆಂಗೇರಿ ಪೊಲೀಸ್ ಠಾಣೆಗೆ ತೆರಳಿ ಸಾಮ್ರಾಟ್ ವಿಜಯ್ ಹಾಗೂ ಆತನ ಸ್ನೇಹಿತರ ವಿರುದ್ಧ ಅಪಹರಣ ಮತ್ತು ಹಲ್ಲೆ ನಡೆಸಿದ ಆರೋಪದಡಿ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.


Spread the love

About Laxminews 24x7

Check Also

ಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಶವವಾಗಿ ಪತ್ತೆ

Spread the loveಕೋಲ್ಕತ್ತಾ: ಪಶ್ಚಿಮ ಬಂಗಾಳದ  ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ  ಅವರ ಸೋದರ ಸಂಬಂಧಿಯ ಪುತ್ರಿ ಬೃಷ್ಟಿ ಮುಖರ್ಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ