Breaking News

ಡಿಸಿಪಿ ಮೇಲೆಯೇ ಯೂತ್ ಕಾಂಗ್ರೆಸ್ ಅಧ್ಯಕ್ಷನಿಂದ ಹಲ್ಲೆ- ಎಫ್‌ಐಆರ್ ದಾಖಲಿಸಲು ಪೊಲೀಸರ ಹಿಂದೇಟು

Spread the love

ಬೆಂಗಳೂರು: ಪ್ರತಿಭಟನೆ ವೇಳೆ ಕರ್ತವ್ಯದಲ್ಲಿದ್ದ ಡಿಸಿಪಿ ಮೇಲೆಯೇ ಯುವ ಕಾಂಗ್ರೆಸ್ ಮುಖಂಡ  ಗೂಂಡಾವರ್ತನೆ ತೋರಿ ಹಲ್ಲೆ ನಡೆಸಿದ್ದರೂ, ಪೊಲೀಸರು ಇನ್ನೂ ಎಫ್‌ಐಆರ್ ದಾಖಲಿಸದೆ ಇರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಭಾನುವಾರ ಸಂಜೆ ನೀಟ್ ಪರೀಕ್ಷಾ ಅಕ್ರಮ ಖಂಡಿಸಿ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿ  ಮುತ್ತಿಗೆಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ತೀವ್ರ ಯತ್ನ ನಡೆಸಿದ್ದರು. ಪರಿಸ್ಥಿತಿ ವಿಕೋಪಕ್ಕೆ ತಿರುಗುತ್ತಿದ್ದಂತೆ ಸ್ಥಳದಲ್ಲಿದ್ದ ಪೊಲೀಸರು ಪರಿಸ್ಥಿತಿ ನಿಯಂತ್ರಣಕ್ಕೆ ಲಾಠಿ ಚಾರ್ಜ್ ನಡೆಸಿದ್ದರು.

ಲಾಠಿ ಚಾರ್ಜ್ ಸಂದರ್ಭದಲ್ಲಿ ರಾಜ್ಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಎಚ್‌.ಎಸ್‌. ಮಂಜುನಾಥ್‌ ಗೌಡ  ಹಾಗೂ ಕಾರ್ಯಕರ್ತರು ಕರ್ತವ್ಯ ನಿರತ ಪೊಲೀಸರ ಮೇಲೆಯೇ ಮುಗಿಬಿದ್ದಿದ್ದಾರೆ. ಉತ್ತರ ವಿಭಾಗದ ಡಿಸಿಪಿ ನೇಮೆಗೌಡ ಅವರನ್ನೇ ಹಿಡಿದು ತಳ್ಳಾಡಿ, ಅವರ ಮೇಲೆ ಹಲ್ಲೆ ಮಾಡಿರುವ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಕರ್ತವ್ಯದಲ್ಲಿದ್ದ ಹಿರಿಯ ಐಪಿಎಸ್ ಅಧಿಕಾರಿಯ ಮೇಲೆಯೇ ಬಹಿರಂಗವಾಗಿ ದೌರ್ಜನ್ಯ ಎಸಗಿದ್ದರೂ, ಘಟನೆ ನಡೆದು ದಿನಗಳೇ ಕಳೆದರೂ ವೈಯಾಲಿಕಾವಲ್ ಠಾಣಾ ಪೊಲೀಸರು ಈವರೆಗೆ ಯಾವುದೇ ಎಫ್‌ಐಆರ್ ದಾಖಲಿಸದೆ ಮೀನಮೇಷ ಎಣಿಸುತ್ತಿದ್ದಾರೆ.

ಸರ್ಕಾರದ ಪ್ರಭಾವಕ್ಕೆ ಮಣಿದು ಪೊಲೀಸ್ ಇಲಾಖೆ ಮಂಡಿಯೂರಿ ಕೂತಿದೆಯೇ ಎಂಬ ಅನುಮಾನ ಸಾರ್ವಜನಿಕ ವಲಯದಲ್ಲಿ ಮೂಡಿದೆ.


Spread the love

About Laxminews 24x7

Check Also

ಮಮತಾ ಬ್ಯಾನರ್ಜಿ ಸೋದರ ಸಂಬಂಧಿ ಪುತ್ರಿ ಶವವಾಗಿ ಪತ್ತೆ

Spread the loveಕೋಲ್ಕತ್ತಾ: ಪಶ್ಚಿಮ ಬಂಗಾಳದ  ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ  ಅವರ ಸೋದರ ಸಂಬಂಧಿಯ ಪುತ್ರಿ ಬೃಷ್ಟಿ ಮುಖರ್ಜಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ