ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ದರ್ಶನ್‌ಗೆ ಮತ್ತೆ ಢವ ಢವ ಶುರುವಾಗಿದೆ. ಇಂದು ಪ್ರದೋಷ್‌ನಿಂದ ಮಾಫಿ ಸಾಕ್ಷಿ ಹೇಳಿಕೆ ದಾಖಲಾಗುತ್ತಾ? ಇಲ್ವಾ? ಎಂಬುದನ್ನ ಕಾದುನೋಡಬೇಕಿದೆ.
ಕೊಲೆ ಪ್ರಕರಣದಲ್ಲಿ ತನ್ನನ್ನ ಮಾಫಿ ಸಾಕ್ಷಿಯಾಗಿ ಪರಿಗಣಿಸಬೇಕೆಂದು ಸಲ್ಲಿಸಿದ್ದ ಅರ್ಜಿಯನ್ನ 59ನೇ ಸಿಸಿಹೆಚ್ ನ್ಯಾಯಾಲಯ ಅಂಗೀಕರಿಸಿತ್ತು. ಸೆ.2 ರಂದು (ಇಂದು) ಸಾಕ್ಷಿ ಹೇಳಿಕೆ ದಾಖಲಿಸಿಕೊಳ್ಳಲು ವಿಟ್ನೆಸ್ ಸಮನ್ಸ್ ಜಾರಿಗೊಳಿಸಿತ್ತು. ನ್ಯಾಯಾಲಯಕ್ಕೆ ಮುಂದೆ ಹಾಜರಾಗಿ ಸಾಕ್ಷಿ ನುಡಿಯಬೇಕು ಎಂದು ಜೈಲಾಧಿಕಾರಿಗಳ ಮೂಲಕ ಸಮನ್ಸ್ ಜಾರಿ ಮಾಡುವಂತೆ ನ್ಯಾಯಾಧೀಶರಾದ ಸುಜಾತ ಮಡಿವಾಳಪ್ಪ ಸಾಂಬ್ರಾಣಿ ಸೂಚಿಸಿದ್ದರು. ಹೀಗಾಗಿ ಇಂದು ಸಾಕ್ಷಿ ನುಡಿಯುತ್ತಾರಾ? ಎಂಬುದು ಕುತೂಹಲ ಮೂಡಿಸಿದೆ.
ಮತ್ತೊಂದು ಮಾಫಿ ಸಾಕ್ಷಿಯಾಗಿ ಪರಿಗಣಿಸಲು ಸೆಷನ್ಸ್ ಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಿ ಕೊಲೆ ಆರೋಪಿ ದರ್ಶನ್ ಹೈಕೋರ್ಟ್ ಮೆಟ್ಟಿಲೇರಿದ್ದು, ಈಂದು ಆದೇಶ ಹೊರಬೀಳುವ ಸಾಧ್ಯತೆಯಿದೆ.
ದರ್ಶನ್ ಪರ ವಕೀಲರು ಸಲ್ಲಿಸಿರುವ ಅರ್ಜಿ ಹೈಕೋರ್ಟ್ ಪಟ್ಟಿಯಲ್ಲಿ 49ನೇ ಮ್ಯಾಟರ್ ಆಗಿದೆ. ಇಂದು 11:30ರ ಹೊತ್ತಿಗೆ ಆದೇಶ ಹೊರಬೀಳುವ ಸಾಧ್ಯತೆಯಿದೆ. ಹೀಗಾಗಿ 12 ಗಂಟೆ ವೇಳೆ ಪ್ರದೋಷ್ ಹೇಳಿಕೆ ದಾಖಲಿಸಲು ಕೋರ್ಟ್ ತಯಾರಿ ನಡೆಸಿದ್ದು, ಕ್ಷಣಕ್ಷಣಕ್ಕೂ ಪ್ರಕರಣ ರೋಚಕ ತಿರುವು ಪಡೆಯುತ್ತಿದೆ.
Laxmi News 24×7