Breaking News

ನಕಲಿ ದಾಖಲೆ ಸೃಷ್ಟಿಸಿ ಜಮೀನು ಮಾರಾಟ ಮಾಡಿದ್ದ ಅಜ್ಜಿ ಅಂದರ್

Spread the love

ಬೆಳಗಾವಿ: ನಕಲಿ ದಾಖಲೆ ಸೃಷ್ಠಿಸಿ  ಬೇರಯವರ ಭೂಮಿ ಮಾರಾಟ ಮಾಡಿದ 80 ವರ್ಷದ ಅಜ್ಜಿಯನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.

ವಡಗಾಂವ ಗಣೇಶ ಕಾಲೋನಿ ನಿವಾಸಿ ಮಂದಾಕಿನಿ ಪರಿಶವಾಡಕರ ಬಂಧಿತ ಆರೋಪಿ. ಬೇರೊಬ್ಬರ ಹೆಸರಿನಲ್ಲಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನನ್ನು ತನ್ನದೆಂದು ಮಾರಾಟ ಮಾಡಿರುವ ಆರೋಪ ಇವರ ಮೇಲೆ ಇದೆ.

ಕಣಬರ್ಗಿ ರಸ್ತೆಯ ಮಹಾಂತೇಶ ನಗರದಲ್ಲಿರುವ ಪ್ಲಾಟ್ ನಂ.2313 ಹಾಗೂ ಸಿಟಿಎಸ್ ನಂ.9449ರ ಜಾಗ ರತ್ನಾ ಯಶವಂತ ಮಲ್ಲೂಕರ ಅವರ ಹೆಸರಿನಲ್ಲಿತ್ತು. ಈ ಜಾಗವನ್ನು ಅಕ್ರಮವಾಗಿ ಪರಭಾರೆ ಮಾಡುವ ಉದ್ದೇಶದಿಂದ ಮಂದಾಕಿನಿ, ರತ್ನಾ ಅವರಂತೆ ನಟನೆ ಮಾಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿರುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ.

2023ರ ಸೆಪ್ಟೆಂಬರ್ 16ರಂದು ಬೆಳಗಾವಿ ಉತ್ತರ ಉಪನೋಂದಣಾಧಿಕಾರಿ ಕಚೇರಿಗೆ ತೆರಳಿದ್ದ ಆರೋಪಿ, ರತ್ನಾ ಮಲ್ಲೂಕರ ಅವರ ಹೆಸರಿನಲ್ಲಿ ವೆಬ್ ಕ್ಯಾಮೆರಾದಲ್ಲಿ ಫೋಟೊ ತೆಗೆಸಿಕೊಂಡಿದ್ದಲ್ಲದೆ, ಅವರ ಹೆಸರಿನಲ್ಲಿ ಹೆಬ್ಬೆರಳಿನ ಗುರುತು ಹಾಗೂ ಸಹಿ ನೀಡಿ ಜಾಗವನ್ನು ಮತ್ತೊಬ್ಬರಿಗೆ ಸೇಲ್‌ಡೀಡ್ ಮಾಡಿರುವ ಆರೋಪವಿದೆ.

ಜಾಗದ ಮಾಲೀಕರಿಗೆ ಈ ವಂಚನೆ ತಿಳಿದುಬಂದ ಬಳಿಕ ರತ್ನಾ ಮಲ್ಲೂಕರ ಅವರು 2025ರ ಫೆಬ್ರವರಿ 4ರಂದು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಮಂದಾಕಿನಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಪ್ರಕರಣದ ಹಲವು ಅಂಶಗಳು ಬಹಿರಂಗಗೊಂಡಿವೆ.

ಪ್ರಕರಣದಲ್ಲಿ ಕೃತ್ಯಕ್ಕೆ ಸಹಕರಿಸಿದ ಆರೋಪದಡಿ ಕಾಕತಿಯ ಸಿದ್ದೇಶ್ವರ ನಗರದ ನಿವಾಸಿ ರಾಹುಲ್ ಅನೀಲ ಮಗದುಮ್ ಎಂಬಾತನ ವಿರುದ್ಧವೂ ಪ್ರಕರಣ ದಾಖಲಾಗಿದೆ. ರಾಹುಲ್ ಈಗಾಗಲೇ ದಾಖಲಾಗಿರುವ ಇನ್ನೆರಡು ಪ್ರಕರಣಗಳಲ್ಲಿ ತಲೆಮರೆಸಿಕೊಂಡಿದ್ದು, ಆತನ ಪತ್ತೆಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ.


Spread the love

About Laxminews 24x7

Check Also

ಮೈಸೂರಿನಲ್ಲಿ ಮತ್ತೊಂದು ʻಗೋಲ್ಡ್ ಸ್ಕ್ಯಾಮ್ʼ – 80ಕ್ಕೂ ಹೆಚ್ಚು ಜನರಿಗೆ ಉಂಡೆನಾಮ!

Spread the loveಮೈಸೂರು: ನಗರದಲ್ಲಿ ಚಿನ್ನತಂಬಿ ಚಿನ್ನ ವಂಚನೆ ಪ್ರಕರಣ ಮಾಸುವ ಮುನ್ನವೆ ಮತ್ತೊಂದು ಗೋಲ್ಡ್ ಸ್ಕ್ಯಾಮ್ ನಡೆದಿದೆ. ಚಿನ್ನದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ