Breaking News

ಮೋದಿ ಜನ್ಮದಿನಕ್ಕೆ ಸಮಾಜಮುಖಿ ಕಾರ್ಯಕ್ರಮಗಳ ಸೇವಾ ಸಂಕಲ್ಪ ಅಭಿಯಾನ

Spread the love

ಬೆಳಗಾವಿ : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನವನ್ನು ಜನಪರ ಹಾಗೂ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಜಿಲ್ಲೆಯ್ಯದ್ಯಂತ ಸೇವಾ ಸಂಕಲ್ಪ ಅಭಿಯಾನ ಆಯೋಜಿಸಿ, ವಿವಿಧ ಸೇವಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ತಿಳಿಸಿದರು.
ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಬುಧವಾರ ನಡೆದ ಅಭಿಯಾನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ,ನರೇಂದ್ರ ಮೋದಿ  ಸಾರ್ವಜನಿಕ ಜೀವನದಲ್ಲಿ 25 ವರ್ಷಗಳ ಸುದೀರ್ಘ ಪಯಣ ಪೂರ್ಣಗೊಳಿಸುತ್ತಿದ್ದು, ಈ ಅವಧಿಯಲ್ಲಿ ಜನಸೇವೆ, ಸುಶಾಸನ, ಸಮರ್ಪಣೆ ಹಾಗೂ ಪರಿವರ್ತನೆಯ ಮೂಲಕ ದೇಶದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇಂತಹ ನಾಯಕನ ಜನ್ಮದಿನವನ್ನು ಕೇವಲ ಸಂಭ್ರಮಾಚರಣೆಯಾಗಿ ಆಚರಿಸುವ ಬದಲು, ಸೇವೆಯ ಮೂಲಕ ಜನರನ್ನು ತಲುಪುವ ಸಂಕಲ್ಪದ ದಿನವನ್ನಾಗಿ ಮಾಡಬೇಕು.
 ಜಿಲ್ಲೆಯ ಪ್ರತಿಯೊಂದು ತಾಲೂಕು ಹಾಗೂ ಮಂಡಲ ಮಟ್ಟದಲ್ಲಿಯೂ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಆಯೋಜಿಸಿ, ಹೆಚ್ಚಿನ ಸಂಖ್ಯೆಯ ಜನರು ಇದರ ಪ್ರಯೋಜನ ಪಡೆಯುವಂತೆ ಕ್ರಮ ಕೈಗೊಳ್ಳಬೇಕು.ಸೇವೆ, ಸಮರ್ಪಣೆ ಮತ್ತು ಸಂಕಲ್ಪ ಎಂಬ ಆಶಯದೊಂದಿಗೆ ಅಭಿಯಾನವನ್ನು ಯಶಸ್ವಿಗೊಳಿಸಬೇಕು. ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರೂ ತಮ್ಮ ತಮ್ಮ ವ್ಯಾಪ್ತಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಅಭಿಯಾನದ ಉದ್ದೇಶವನ್ನು ಜನರಿಗೆ ತಲುಪಿಸಬೇಕು ಎಂದರು.
ಸೇವಾ ಸಂಕಲ್ಪ ಅಭಿಯಾನದ ಜಿಲ್ಲಾ ಸಂಚಾಲಕ ಸಂದೀಪ ದೇಶಪಾಂಡೆ, ಸಂತೋಷ ಹಡಪದ, ಮಹಾಂತೇಶ ಚಿನ್ನಪ್ಪಗೌಡರ, ಯಲ್ಲೇಶ ಕೋಲಕಾರ, ಜಗದೀಶ ಬೂದಿಹಾಳ, ಮಹೇಶ ಮೋಹಿತೆ, ಮುರುಘೇಂದ್ರಗೌಡ ಪಾಟೀಲ, ಪ್ರಮೋದ ನುಗ್ಗಾನಟ್ಟಿ ಇತರರಿದ್ದರು.

Spread the love

About Laxminews 24x7

Check Also

ಮೈಸೂರಿನಲ್ಲಿ ಮತ್ತೊಂದು ʻಗೋಲ್ಡ್ ಸ್ಕ್ಯಾಮ್ʼ – 80ಕ್ಕೂ ಹೆಚ್ಚು ಜನರಿಗೆ ಉಂಡೆನಾಮ!

Spread the loveಮೈಸೂರು: ನಗರದಲ್ಲಿ ಚಿನ್ನತಂಬಿ ಚಿನ್ನ ವಂಚನೆ ಪ್ರಕರಣ ಮಾಸುವ ಮುನ್ನವೆ ಮತ್ತೊಂದು ಗೋಲ್ಡ್ ಸ್ಕ್ಯಾಮ್ ನಡೆದಿದೆ. ಚಿನ್ನದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ