Breaking News

ರಾಘವೇಂದ್ರ ಸ್ವಾಮಿಗಳ 355ನೇ ಆರಾಧನಾ ಮಹೋತ್ಸವಕ್ಕೆ ಅದ್ಧೂರಿ ತೆರೆ

Spread the love

ರಾಯಚೂರು: ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿಗಳ  355ನೇ ಆರಾಧನಾ ಮಹೋತ್ಸವಕ್ಕೆ ಸರ್ವ ಸಮರ್ಪಣೋತ್ಸವದೊಂದಿಗೆ ಅದ್ಧೂರಿ ತೆರೆ ಬಿದ್ದಿದೆ. ಏಳುದಿನಗಳ ಸಪ್ತರಾತ್ರೋತ್ಸವ ಮುಕ್ತಾಯಗೊಂಡಿದೆ.

ರಾಯರ ಉತ್ತರಾರಾಧನೆ ಬಳಿಕ ಎರಡು ದಿನಗಳ ಕಾಲ ಆರಾಧನೆ ಹಿನ್ನೆಲೆ ರಾಯರ ಮಠದಲ್ಲಿ ವಿಶೇಷ ಪೂಜೆಗಳು, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದಿದ್ದು ಸರ್ವ ಸಮರ್ಪಣೋತ್ಸವದೊಂದಿಗೆ ಆರಾಧನಾ ಮಹೋತ್ಸವಕ್ಕೆ ತೆರೆ ಎಳೆಯಲಾಗಿದೆ.

ಎಲ್ಲಾ ಉತ್ಸವ ವಾಹನಗಳನ್ನು ಭವ್ಯವಾದ ಮರದ ರಥದ ಮೇಲೆ ಇರಿಸಿ ವೈಭವದ ರಥೋತ್ಸವದ ಮೂಲಕ ಹೊರತರುವುದು ಕೊನೆಯ ದಿನದ ವಿಶೇಷವಾಗಿತ್ತು. ನಂತರ 355 ನೇ ಆರಾಧನಾ ಮಹೋತ್ಸವದ ಸಮಯದಲ್ಲಿ ಮಾಡಿದ ಎಲ್ಲಾ ಉತ್ಸವಗಳು, ಸೇವೆಗಳು ಮತ್ತು ವಿಶೇಷ ನೈವೇದ್ಯಗಳನ್ನು ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಸ್ವಾಮಿ ರಾಯರಿಗೆ ಅರ್ಪಿಸಿದರು. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ರಾಯರ ಆರಾಧನಾ ಮಹೋತ್ಸವಕ್ಕೆ ವಿದ್ಯುಕ್ತ ತೆರೆ ಎಳೆಯಲಾಗಿದೆ.


Spread the love

About Laxminews 24x7

Check Also

ಮೈಸೂರಿನಲ್ಲಿ ಮತ್ತೊಂದು ʻಗೋಲ್ಡ್ ಸ್ಕ್ಯಾಮ್ʼ – 80ಕ್ಕೂ ಹೆಚ್ಚು ಜನರಿಗೆ ಉಂಡೆನಾಮ!

Spread the loveಮೈಸೂರು: ನಗರದಲ್ಲಿ ಚಿನ್ನತಂಬಿ ಚಿನ್ನ ವಂಚನೆ ಪ್ರಕರಣ ಮಾಸುವ ಮುನ್ನವೆ ಮತ್ತೊಂದು ಗೋಲ್ಡ್ ಸ್ಕ್ಯಾಮ್ ನಡೆದಿದೆ. ಚಿನ್ನದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ