Breaking News

200 ವರ್ಷಗಳ ಬಳಿಕ ಕುಟುಂಬದಲ್ಲಿ ಹೆಣ್ಣು ಮಗು ಜನನ – ರಥದಲ್ಲಿ ಕೂರಿಸಿ ಅದ್ದೂರಿ ಸ್ವಾಗತ

Spread the love

ಮುಂಬೈ: ಹೆಣ್ಣು ಮಗು ಬೇಡ ಎಂದು ಭ್ರೂಣ ಹತ್ಯೆ ಮಾಡಿಸುವ ಈ ಕಾಲದಲ್ಲಿ ಹೆಣ್ಣು ಮಗು ಜನಿಸಿದೆ ಎಂದು ಕುಟುಂಬವೊಂದು ರಥದಲ್ಲಿ ಕೂರಿಸಿ ಅದ್ದೂರಿಯಾಗಿ ಸ್ವಾಗತಿಸಿರುವ ಘಟನೆ ಮಹಾರಾಷ್ಟ್ರದ ಬೀಡ್‌ನಲ್ಲಿ ನಡೆದಿದೆ.

ಹೌದು, ಈ ಕುಟುಂಬದಲ್ಲಿ ಸುಮಾರು 200 ವರ್ಷಗಳ ಅಂದರೆ ನಾಲ್ಕು ತಲೆಮಾರುಗಳ ಬಳಿಕ ಹೆಣ್ಣು ಮಗು ಜನಿಸಿದೆ. ಹೆರಿಗೆಯಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಬಳಿಕ ಕುಟುಂಬಸ್ಥರು ಮಗು ಹಾಗೂ ತಾಯಿಯನ್ನು ರಥದಲ್ಲಿ ಕೂರಿಸಿ, ತಾಳ-ವಾದ್ಯಗಳು ಹಾಗೂ ನೃತ್ಯದೊಂದಿಗೆ ಅದ್ದೂರಿಯಾಗಿ ಮೆರವಣಿಗೆಯಾಗುವ ಮೂಲಕ ಮನೆಗೆ ಸ್ವಾಗತಿಸಿದ್ದಾರೆ.

ಹೆಣ್ಣು ಮಗುವಿಗೆ ಗಾರ್ಗಿ ಎಂದು ಹೆಸರಿಡಲಾಗಿದೆ. ಮಗುವಿನ ತಾತ ಲಿಂಬಾಜಿ ದಹೀಫಾಲೆ ಅವರು ಗಾರ್ಗಿ ಕುರಿತು ಮಾತನಾಡುವಾಗ ಭಾವುಕರಾದರು. ಕುಟುಂಬದಲ್ಲಿ ಹೆಣ್ಣು ಮಗು ಇರುವುದು ದೊಡ್ಡ ಭಾಗ್ಯ. ಇಷ್ಟು ವರ್ಷಗಳ ಕಾಲ ನಮ್ಮಲ್ಲಿ ಹೆಣ್ಣು ಮಗು ಇಲ್ಲದಿರುವ ಕೊರಗಿತ್ತು, ಇಂದು ಅದು ಈಡೇರಿದೆ. ಅಲ್ಲದೇ ನನ್ನಿಬ್ಬರೂ ಸೊಸೆಯಂದಿರನ್ನು ನನ್ನ ಸ್ವಂತ ಹೆಣ್ಣುಮಕ್ಕಳಂತೆ ನೋಡಿಕೊಂಡಿದ್ದೇನೆ. ಸಂಗೀತ ಹಾಗೂ ನೃತ್ಯದೊಂದಿಗೆ ತಮ್ಮ ಮೊಮ್ಮಗಳನ್ನು ರಥದಲ್ಲಿ ಮನೆಗೆ ಕರೆತಂದಿರುವುದಕ್ಕೆ ಅತೀವ ಆನಂದ ವ್ಯಕ್ತಪಡಿಸಿದ್ದಾರೆ.

ಮಗುವಿನ ಅಜ್ಜಿ ಸುಖಾ ದಹೀಫಾಲೆ ಮಾತನಾಡಿ, ಮಗುವನ್ನು ಬಹಳ ವಿಜೃಂಭಣೆಯಿಂದ ಸ್ವಾಗತಿಸಲು ಆಸ್ಪತ್ರೆಯಲ್ಲಿಯೇ ಕುಟುಂಬದವರು ನಿರ್ಧರಿಸಿದ್ವಿ. ಇಂದು ನಮ್ಮ ಮನೆಗೆ ಲಕ್ಷ್ಮಿ ಬಂದಿರುವುದಕ್ಕೆ ನಮಗೆ ತುಂಬಾ ಖುಷಿಯಾಗಿದೆ ಎಂದು ಹೇಳಿದ್ದಾರೆ.

ಗಾರ್ಗಿಯ ತಂದೆ ಕೂಡ ಸಂತೋಷವನ್ನು ವ್ಯಕ್ತಪಡಿಸಿ, ಜನಸಾಮಾನ್ಯರು ಸಾಮಾನ್ಯವಾಗಿ ಗಂಡು ಮಗುವನ್ನು ಬಯಸುತ್ತಾರೆ, ಆದರೆ ಹೆಣ್ಣು ಮಗುವನ್ನು ಹೊಂದುವ ಅನುಭವ ಮತ್ತು ಸಂತೋಷವೇ ಬೇರೆ. ಹೆಣ್ಣುಮಕ್ಕಳು ತಂದೆಯೊಂದಿಗೆ ಹೆಚ್ಚು ಆಪ್ತರಾಗಿರುತ್ತಾರೆ. ನಾವು ನಮ್ಮ ಮಗಳನ್ನು ಹೂವಿನಂತೆ ಬೆಳೆಸುತ್ತೇವೆ ಎಂದಿದ್ದಾರೆ.


Spread the love

About Laxminews 24x7

Check Also

ಸಾಲ ತೀರಿಸಲು ಹಣ ಕೊಟ್ಟಿಲ್ಲವೆಂದು ರಾಡ್‌ನಿಂದ ಹೊಡೆದು ತಂದೆಯನ್ನೇ ಕೊಂದ ಮಗ

Spread the loveಕೋಲಾರ: ಸಾಲ (Debt) ತೀರಿಸಲು ಹಣ ನೀಡಲಿಲ್ಲವೆಂದು ತಂದೆಯನ್ನೇ ರಾಡ್‌ನಿಂದ ಹೊಡೆದು ಮಗ ಕೊಂದಿರುವ ಘಟನೆ ಕೋಲಾರದಲ್ಲಿ  …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ