Breaking News

ನಾಡಿನಾದ್ಯಂತ ಇಂದು ಶ್ರೀಕೃಷ್ಣ ಜನ್ಮಾಷ್ಟಮಿಯ ಸಂಭ್ರಮ

Spread the love

ಬೆಂಗಳೂರು: ನಾಡಿನಲ್ಲೆಡೆ ಇಂದು ಬೃಂದಾವನದ ನಂದನ ಶ್ರೀ ಕೃಷ್ಣನ ಜನ್ಮಾಷ್ಟಮಿಯ ಸಂಭ್ರಮ. ಬೆಂಗಳೂರಿನ ವೇಣು ಮಾದವನ ದೇವಾಲಯಗಳಲ್ಲಿ ಶ್ರೀಕೃಷ್ಣಾಷ್ಟಮಿಯ ಸಂಭ್ರಮ ಜೋರಾಗಿಯೇ ನಡೆಯುತ್ತಿದೆ. ಇದರೊಂದಿಗೆ ರಾಜ್ಯದ ವಿವಿಧ ಶ್ರೀಕೃಷ್ಣನ ಸನ್ನಿಧಿಗಳಲ್ಲಿ ಸಂಭ್ರಮಾಚರಣೆ ನಡೆಯುತ್ತಿದೆ.

ಬೆಂಗಳೂರಿನ ಪ್ರಸಿದ್ಧ ಇಸ್ಕಾನ್ ದೇವಾಲಯದಲ್ಲೂ ಶ್ರೀ ಕೃಷ್ಣನ ಜನ್ಮಾಷ್ಟಮಿಯ ಸಂಭ್ರಮ ಮನೆ ಮಾಡಿದೆ. ಹಬ್ಬದ ದಿನ ಬೃಂದಾವನದ ಟೀಮ್‌ನಿಂದ ಮುಖ್ಯ ಮಂದಿರದಲ್ಲಿ ನವಿಲಿನ ಅಲಂಕಾರ ಮಾಡಲಾಗಿದೆ.

ರಂಗ ಮಂದಿರದಲ್ಲಿ ವಿಶೇಷವಾಗಿ ರಾಧ – ಕೃಷ್ಣ ಉತ್ಸವ ಮೂರ್ತಿಗಳಿಗೆ 4 ಬಾರಿ 108 ಬಗೆಯ ಜಲಾಮೃತದ ಅಭಿಷೇಕವನ್ನ ಕೂಡ ಮಾಡಲಾಗ್ತಿದೆ.

ಇಂದು ರಾತ್ರಿ 12 ಗಂಟೆಯವರೆಗೆ ಭಕ್ತರಿಗೆ ದೇವರ ದರ್ಶನದ ವ್ಯವಸ್ಥೆ ಇರಲಿದ್ದು, ಅಂದಾಜಿನ ಪ್ರಕಾರ 2 ರಿಂದ 3 ಲಕ್ಷ ಭಕ್ತರು ಇಂದು ಶ್ರೀ ಕೃಷ್ಣನ ದರ್ಶನ ಪಡೆಯಲಿದ್ದಾರೆ.


Spread the love

About Laxminews 24x7

Check Also

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ – ಶಾಸಕ ಸುರೇಶ್‌ಗೌಡ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Spread the loveಮಂಡ್ಯ: ಕರ್ತವ್ಯನಿರತ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಸಕ ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ