Breaking News

ಕೆಎಂಎಫ್ ನಂದಿನಿ ಹಾಲಿನ ಟ್ಯಾಂಕರ್ ಪಲ್ಟಿ – 14 ಸಾವಿರ ಲೀಟರ್ ಹಾಲು ರಸ್ತೆಪಾಲು

Spread the love

ಬೆಂಗಳೂರು: ಕೆಎಂಎಫ್  ನಂದಿನಿ ಹಾಲಿನ ಟ್ಯಾಂಕರ್ ಪಲ್ಟಿಯಾದ ಪರಿಣಾಮ 14 ಸಾವಿರ ಲೀಟರ್ ಹಾಲು ರಸ್ತೆಯಲ್ಲಿ ಹರಿದ ಘಟನೆ ಹೆಬ್ಬಾಳ ಸಮೀಪ ನಡೆದಿದೆ.

ಕೆಎಂಎಫ್‌ಗೆ ಹೊರಟಿದ್ದ ಹಾಲಿನ ಟ್ಯಾಂಕರ್ ಹೆಬ್ಬಾಳ ಸಮೀಪ ಸರ್ವಿಸ್ ರಸ್ತೆಯಲ್ಲಿ ಪಲ್ಟಿಯಾಗಿದೆ. ಟ್ಯಾಂಕರ್ ಮುಚ್ಚಳ ಮುಚ್ಚಲು ಸಾರ್ವಜನಿಕರು ಪರದಾಡಿದ್ದಾರೆ. ಇನ್ನೂ ಕೆಲವರು ನೀರಿನ ಬಾಟಲಿಯಲ್ಲಿ ಹಾಲು ತುಂಬಿಕೊಂಡಿದ್ದಾರೆ.

ಘಟನೆಯಲ್ಲಿ ಚಾಲಕನಿಗೆ ಗಂಭೀರ ಗಾಯಗಳಾಗಿದ್ದು, ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಲಾಗಿದೆ. ಟ್ಯಾಂಕರ್ ಪಲ್ಟಿಯಾದ ಪರಿಣಾಮ 14 ಸಾವಿರ ಲೀಟರ್ ಹಾಲು ರಸ್ತೆಪಾಲಾಗಿದೆ. ಘಟನಾ ಸ್ಥಳಕ್ಕೆ ಸಂಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ


Spread the love

About Laxminews 24x7

Check Also

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ – ಶಾಸಕ ಸುರೇಶ್‌ಗೌಡ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Spread the loveಮಂಡ್ಯ: ಕರ್ತವ್ಯನಿರತ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಸಕ ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ