Breaking News

ಬಾಗಲಕೋಟೆ ಶಾಲಾ ಕೊಠಡಿ ಮೇಲ್ಛಾವಣಿ ಕುಸಿತ: ಪ್ರಭಾರಿ ಮುಖ್ಯಶಿಕ್ಷಕ ಸೇರಿ ಇಬ್ಬರು ಇಂಜಿನಿಯರ್‌ಗಳು ಅಮಾನತು

Spread the love

ಬಾಗಲಕೋಟೆ: ತರಗತಿಯಲ್ಲಿ ಪಾಠ ಕೇಳುತ್ತಿದ್ದ ವೇಳೆಯಲ್ಲೇ ಕೊಠಡಿಯ ಮೇಲ್ಛಾವಣಿಯ ಕಾಂಕ್ರೀಟ್ ಕುಸಿದು ಬಿದ್ದು ವಿದ್ಯಾರ್ಥಿಗಳು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ, ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಹಾಗೂ ಇಬ್ಬರು ಇಂಜಿನಿಯರ್‌ಗಳನ್ನುಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.

ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ತಾಂಡಾದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.2 ರಂದು ದಿನನಿತ್ಯದಂತೆ ತರಗತಿ ನಡೆಯುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಮೇಲ್ಛಾವಣಿಯ ಪ್ಲಾಸ್ಟರಿಂಗ್ ಹಾಗೂ ಕಾಂಕ್ರೀಟ್ ಚೂರುಗಳು ಮಕ್ಕಳ ಮೇಲೆ ಬಿದ್ದಿವೆ. ಈ ದುರ್ಘಟನೆಯಲ್ಲಿ ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದರು.

ಗಾಯಗೊಂಡ ಮಕ್ಕಳನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಕಟ್ಟಡ ದುಸ್ಥಿತಿಯಲ್ಲಿದ್ದರೂ ದುರಸ್ತಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಮತ್ತು ಪೋಷಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು.

ಕೊಠಡಿಯ ಮೇಲ್ಛಾವಣಿ ದುರಸ್ತಿ ಹಂತದಲ್ಲಿದ್ದರೂ ನಿರ್ಲಕ್ಷ್ಯ ವಹಿಸಿ, ಇಲಾಖೆಯ ಗಮನಕ್ಕೆ ತಾರದೆ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಪ್ರಭಾರಿ ಮುಖ್ಯಶಿಕ್ಷಕ ಸಿ.ಬಿ. ಹೆಳವರ ಅವರನ್ನು ಕರ್ನಾಟಕ ನಾಗರಿಕ ಸೇವೆ (ಸಿಸಿಎ) 1957ರ ನಿಯಮ 10(1)ರ ಅನ್ವಯ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ (ಡಿಡಿಪಿಐ) ಆರ್.ಎಸ್. ಸೀತಾರಾಮು ಅವರು ಅಮಾನತುಗೊಳಿಸಿದ್ದಾರೆ.

ಶಾಲಾ ಕಟ್ಟಡದ ಫಿಟ್‌ನೆಸ್ ಪ್ರಮಾಣಪತ್ರ ನೀಡುವಲ್ಲಿ ವಿಫಲರಾದ ಕಾರಣ ಪಿ.ಆರ್.ಇ.ಡಿ. (PRED) ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಎಸ್.ಎಂ. ರೇವಡಿ ಹಾಗೂ ಜೂನಿಯರ್ ಇಂಜಿನಿಯರ್ ಎಸ್.ಎಂ. ಸಂಗನಾಳ ಅವರನ್ನು ಬಾಗಲಕೋಟೆ ಜಿಲ್ಲಾ ಪಂಚಾಯಿತಿ ಸಿಇಒ ಗಜಾನನ ಬಾಲೆ ಅವರು ಅಮಾನತುಗೊಳಿಸಿ ಆದೇಶಿಸಿದ್ದಾರೆ.


Spread the love

About Laxminews 24x7

Check Also

ಚಿನ್ನ ಅಡವಿಟ್ಟುಕೊಂಡು ವಂಚನೆ, ನೂರಾರು ಜನಕ್ಕೆ ನಾಮ – ಮೈಸೂರಿನಲ್ಲಿ ಮತ್ತೊಬ್ಬ `ಗೋಲ್ಡ್ ವಂಚಕ’

Spread the loveಮೈಸೂರು: ಚಿನ್ನದ ಹೆಸರಿನಲ್ಲಿ ಗ್ರಾಹಕರಿಗೆ ವಂಚನೆ ಮಾಡಿದ ಸರಣಿ ಅಪರಾಧ ಮೈಸೂರಿನಲ್ಲಿ ಮುಂದುವರಿದಿದೆ. ಚಿನ್ನತಂಬಿ, ಮೋಹನ್‌ಲಾಲ್ ಬಳಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ