Breaking News

ಪ್ರೀತಿ ಹೆಸರಲ್ಲಿ ಯುವಕನಿಂದ ಕಿರುಕುಳ – ನೇಣು ಬಿಗಿದುಕೊಂಡು ಯುವತಿ ಆತ್ಮಹತ್ಯೆ

Spread the love

ಚಾಮರಾಜನಗರ: ಪ್ರೀತಿ ಹೆಸರಿನಲ್ಲಿ ಕಿರುಕುಳ ನೀಡುತ್ತಿದ್ದ ಯುವಕನ ಕಾಟಕ್ಕೆ ಬೇಸತ್ತು ಯುವತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಕೆಸ್ತೂರು ಗ್ರಾಮದಲ್ಲಿ ನಡೆದಿದೆ.

ವರ್ಷಾ (22) ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವತಿ. ಮೃತ ವರ್ಷಾ ಮೈಸೂರಿನಲ್ಲಿ ಬಿ.ಇ ವ್ಯಾಸಂಗ ಮಾಡುತ್ತಿದ್ದರು. ಕೆಲ ದಿನಗಳಿಂದ ಪ್ರೀತಿಸುವಂತೆ ಕಿರುಕುಳ ನೀಡುತ್ತಿದ್ದ. ಯುವಕನ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ಬಳಿಕ ವರ್ಷಾಳ ತಾಯಿ ನಾಗರತ್ನಮ್ಮ ಪೊಲೀಸ್‌ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.

ಸದ್ಯ ಕೇಸ್‌ ದಾಖಲಿಸಿಕೊಂಡಿರುವ ಯಳಂದೂರು ಠಾಣೆ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಚಿನ್ನ ಅಡವಿಟ್ಟುಕೊಂಡು ವಂಚನೆ, ನೂರಾರು ಜನಕ್ಕೆ ನಾಮ – ಮೈಸೂರಿನಲ್ಲಿ ಮತ್ತೊಬ್ಬ `ಗೋಲ್ಡ್ ವಂಚಕ’

Spread the loveಮೈಸೂರು: ಚಿನ್ನದ ಹೆಸರಿನಲ್ಲಿ ಗ್ರಾಹಕರಿಗೆ ವಂಚನೆ ಮಾಡಿದ ಸರಣಿ ಅಪರಾಧ ಮೈಸೂರಿನಲ್ಲಿ ಮುಂದುವರಿದಿದೆ. ಚಿನ್ನತಂಬಿ, ಮೋಹನ್‌ಲಾಲ್ ಬಳಿಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ