Breaking News

ಪರಪ್ಪನ ಅಗ್ರಹಾರ ಜೈಲು ವಾರ್ಡರ್ ಮೇಲೆ ಹಲ್ಲೆ ನಡೆಸಿ ಕೊಲೆಗೆ ಯತ್ನ – ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಕೃತ್ಯ ಆರೋಪ

Spread the love

ಬೆಂಗಳೂರು: ಕರ್ತವ್ಯನಿರತ ಜೈಲು ವಾರ್ಡರ್‌  ಮೇಲೆ ಜೈಲುವಾಸಿಗಳು ಮನಸೋ ಇಚ್ಛೆ ಹಲ್ಲೆ ನಡೆಸಿ, ಕೊಲೆಗೆ ಯತ್ನಿಸಿರುವ ಘಟನೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಡೆದಿದೆ.

ಮಂಜುನಾಥ ಹವೇಲಿ ಹಲ್ಲೆಗೊಳಗಾದ ಜೈಲು ವೀಕ್ಷಕ. ಸೆ. 2ರಂದು ಬೆಳಿಗ್ಗೆ 11:30ರ ಸುಮಾರಿಗೆ ಘಟನೆ ನಡೆದಿದ್ದು, ಮಂಗಳೂರಿನ ಭಜರಂಗದಳ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಕೊಲೆ ಪ್ರಕರಣದ ಕೈದಿಗಳು ಈ ಕೃತ್ಯವೆಸಗಿದ್ದಾರೆ. ಮೊಹಮ್ಮದ್ ಮುಜಾಮಿಲ್, ಅಬ್ದುಲ್ ಶಫ್ಘಾನ್, ಮೊಹಮ್ಮದ್ ರಿಜ್ವಾನ್, ನಯಾಜ್, ಕಲಂದರ್ ಶಫಿಯಿಂದ ಕೊಲೆ ಯತ್ನ ನಡೆದಿರುವುದು ತಿಳಿದುಬಂದಿದೆ.

ಹಲ್ಲೆಗೊಳಗಾದ ಮಂಜುನಾಥ್ ಪ್ರಸ್ತುತ ಅವಧಿಪೂರ್ವ ಬಿಡುಗಡೆಗೆ ಸಂಬಂಧಿಸಿದಂತೆ ವಿಷಯ ನಿರ್ವಾಹಕನಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇದೆ ವಿಚಾರವಾಗಿ ಶಿಕ್ಷಾ ಬಂಧಿ ವಿಭಾಗಕ್ಕೆ ತೆರಳಿದ್ದ ವೇಳೆ ಆರೋಪಿಗಳು ಅವ್ಯಾಚ ಶಬ್ಧಗಳಿಂದ ನಿಂದಿಸಿದ್ದಾರೆ. ಏಕಾಎಕಿ ವಾರ್ಡರ್‌ ಮೂಗಿಗೆ ಗುದ್ದಿ, ಕೊಲೆಗೆ ಯತ್ನಿಸಿದ್ದಾರೆ.

5 ಮಂದಿ ಆರೋಪಿಗಳು ಮಂಜುನಾಥ್‌ ಅವರನ್ನು ಕೊಠಡಿ ಸಂಖ್ಯೆ 04ಕ್ಕೆ ಎಳೆದೊಯ್ದು ಮೊದಲು ಮನಸೋ ಇಚ್ಚೆ ಹಲ್ಲೆ ಮಾಡಿದ್ದಾರೆ. ಬಳಿಕ ಕುತ್ತಿಗೆಯನ್ನು ಬಲವಾಗಿ ಹಿಸುಕಿ, ಉಸಿರುಗಟ್ಟಿಸಿ ಕೊಲೆಗೆ ಯತ್ನಿಸಿದ್ದಾರೆ. ಅಷ್ಟರೊಳಗೆ ಕರ್ತವ್ಯನಿರತ ಇನ್ನುಳಿದ ಅಧಿಕಾರಿ ಮತ್ತು ಸಿಬ್ಬಂದಿಗಳು ಮಂಜುನಾಥ್‌ ಅವರನ್ನು ರಕ್ಷಿಸಿದ್ದಾರೆ.

ಹಲ್ಲೆಗೆ ಕಾರಣ
ಮುಖ್ಯ ಅಧೀಕ್ಷಕರ ಮೌಖಿಕ ಆದೇಶದ ಮೇರೆಗೆ, ತಿಂಗಳ ಹಿಂದೆ ಕೆಲ ಜೈಲು ಬಂಧಿಗಳನ್ನು ಭದ್ರತಾ ವಿಭಾಗದಿಂದ ಅನೆಕ್ಸ್-1 ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿತ್ತು. ಈ ವೇಳೆ ಆರೋಪಿಗಳಿಗೆ ಮಂಜುನಾಥ್‌ ಹೆಚ್ಚುವರಿ ವಸ್ತುಗಳನ್ನು ತೆಗೆದುಕೊಂಡು ಹೋಗಲು ಅವಕಾಶ ನೀಡಿರಲಿಲ್ಲ. ಬಂಧಿಗಳ ವಸ್ತುಗಳನ್ನು ತಪಾಸಣೆ ಮಾಡಿದ್ದಕ್ಕೆ ಮಂಜುನಾಥ್ ಮತ್ತು ಹಲ್ಲೆ ಮಾಡಿದ ಆರೋಪಿಗಳ ನಡುವೆ ವಾಗ್ವಾದ ನಡೆದಿತ್ತು. ಜೊತೆಗೆ ಜೈಲಿನ ಅಕ್ರಮ ಚಟುವಟಿಕೆಗಳ ಬಗ್ಗೆ ಹಿರಿಯ ಅಧಿಕಾರಿಗಳಿಗೆ ತಿಳಿಸುತ್ತಿದ್ದ ಕಾರಣ, ಹಳೆ ದ್ವೇಷದ ಹಿನ್ನೆಲೆ ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಹಲ್ಲೆ ಮಾಡಿರುವುದಾಗಿ ತಿಳಿದುಬಂದಿದೆ. ಈ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


Spread the love

About Laxminews 24x7

Check Also

ರೇಣುಕಾಸ್ವಾಮಿ ಹತ್ಯೆ ಕೇಸ್‌ – ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿಗೆ ಜಾಮೀನು

Spread the loveಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ  ಸಾಕ್ಷಿಗಳಿಗೆ ಬೆದರಿಕೆ ಹಾಕಿದ್ದ ಪ್ರಮುಖ ಆರೋಪಿ ಉಡುಪಿ ಮೂಲದ ಗೌರವ್ ಶೆಟ್ಟಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ