Breaking News

ನವಲಗುಂದ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಗುಂಡಿನ ಸದ್ದು……..

Spread the love

ಧಾರವಾಡ: ಜಿಲ್ಲೆಯ ನವಲಗುಂದ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಗುಂಡಿನ ಸದ್ದು ಮೊಳಗಿದ್ದು, ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ಮಲ್ಲಪ್ಪ ಕರಿ ಎಂಬಾತ ಅದೇ ಗ್ರಾಮದ ಶರಣಪ್ಪ ಕಾಳೆ ಎಂಬಾತನ ಮೇಲೆ ಗುಂಡು ಹಾರಿಸಿದ್ದಾನೆ. ಇಬ್ಬರ ಮಧ್ಯೆ ಹಣದ ವಿಚಾರವಾಗಿ ಜಗಳ ನಡೆದಿತ್ತು. ಈ ಹಿನ್ನೆಲೆಯಲ್ಲಿ ಕೋಪಗೊಂಡ ಮಲ್ಲಪ್ಪ ಗುಂಡು ಹಾರಿಸಿದ್ದಾನೆ. ಶರಣಪ್ಪನ ಹೊಟ್ಟೆ ಮತ್ತು ಕೈಗೆ ಗುಂಡು ತಗುಲಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ನವಲಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ನವಲಗುಂದ ಠಾಣೆಯ ಪಿಎಸ್‍ಐ ಜಯಪಾಲ್ ಪಾಟೀಲ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ನವಲಗುಂದ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಲಿದೆ.


Spread the love

About Laxminews 24x7

Check Also

ವಿನಯ್ ಕುಲಕರ್ಣಿ ದೋಷಿ ಇಂದು ಶಿಕ್ಷೆ ಪ್ರಮಾಣ ಪ್ರಕಟ

Spread the loveಧಾರವಾಡ: ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ವಿನಯ್ ಕುಲಕರ್ಣಿ  ಯೋಗೇಶ್‌ಗೌಡ  ಕೊಲೆ ಕೇಸಲ್ಲಿ ಅಪರಾಧಿಯಾಗಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ