Breaking News

ವಿಟ್ಲಪಿಂಡಿ ಉತ್ಸವ ವೇಳೆ ರಥದಿಂದ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ

Spread the love

ಉಡುಪಿ: ಶ್ರೀಕೃಷ್ಣ ಮಠದಲ್ಲಿ ನಡೆದ ವಿಟ್ಲಪಿಂಡಿ ಉತ್ಸವದ ವೇಳೆ ಅನಿರೀಕ್ಷಿತ ಅವಘಡವೊಂದು ನಡೆದಿದೆ. ಚಿನ್ನದ ರಥದಲ್ಲಿ ರಥಾರೂಢವಾಗಿದ್ದ ಕೃಷ್ಣನ ಮಣ್ಣಿನ ಮೂರ್ತಿಯನ್ನು ಉತ್ಸವದ ಬಳಿಕ ಇಳಿಸುವ ವೇಳೆ, ಪರ್ಯಾಯ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಗಳ ಕೈಯಿಂದ ಮೂರ್ತಿ ಜಾರಿ ಕೆಳಗೆ ಬಿದ್ದು ಭಗ್ನವಾಗಿದೆ. ಘಟನೆ ಕಂಡು ಸ್ಥಳದಲ್ಲಿದ್ದ ಭಕ್ತರಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಉಡುಪಿ ಶ್ರೀಕೃಷ್ಣ ಮಠದಲ್ಲಿ ಶ್ರೀಕೃಷ್ಣ ಲೀಲೋತ್ಸವದ ಅಂಗವಾಗಿ ವಿಟ್ಲಪಿಂಡಿ ಮಹೋತ್ಸವ ಅದ್ಧೂರಿಯಾಗಿ ನಡೆಯಿತು. ಚಾತುರ್ಮಾಸದ ಹಿನ್ನೆಲೆ ಪ್ರತಿಷ್ಠಾಪಿಸಲಾಗಿದ್ದ ಕೃಷ್ಣನ ಮಣ್ಣಿನ ಮೂರ್ತಿಯನ್ನು ಚಿನ್ನದ ರಥದಲ್ಲಿ ರಥಾರೂಢಗೊಳಿಸಿ, ರಥಬೀದಿಯಲ್ಲಿ ಮೆರವಣಿಗೆ ನಡೆಸಲಾಯಿತು.

ಉತ್ಸವದಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು. ರಥೋತ್ಸವದ ಬಳಿಕ ಕೃಷ್ಣನ ಮಣ್ಣಿನ ಮೂರ್ತಿಯನ್ನು ರಥದಿಂದ ಇಳಿಸಿ, ಮಧ್ವ ಸರೋವರದಲ್ಲಿ ವಿಸರ್ಜನೆಗೆ ಕೊಂಡೊಯ್ಯಲಾಗುತ್ತಿತ್ತು. ಈ ವೇಳೆ ಪರ್ಯಾಯ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಗಳ ಕೈಯಿಂದ ಕೃಷ್ಣನ ಮೂರ್ತಿ ಆಕಸ್ಮಿಕವಾಗಿ ಜಾರಿ ಕೆಳಗೆ ಬಿದ್ದಿದೆ. ಕೆಳಗೆ ಬಿದ್ದ ರಭಸಕ್ಕೆ ಮಣ್ಣಿನಿಂದ ಮಾಡಲಾಗಿದ್ದ ಕೃಷ್ಣನ ಮೂರ್ತಿ ಭಗ್ನವಾಗಿದೆ.

ಮೂರ್ತಿ ಕೈಯಿಂದ ಜಾರಿ ಬಿದ್ದ ದೃಶ್ಯ ಕಂಡು ಸ್ಥಳದಲ್ಲಿದ್ದ ಭಕ್ತರಲ್ಲಿ ಕೆಲಕಾಲ ಆತಂಕ ಮೂಡಿತು. ಪ್ರತಿವರ್ಷದಂತೆ ಈ ಬಾರಿಯೂ ಭಕ್ತರ ಸಮ್ಮುಖದಲ್ಲಿ ವೈಭವದಿಂದ ನಡೆದ ವಿಟ್ಲಪಿಂಡಿ ಉತ್ಸವದ ಅಂತಿಮ ಹಂತದಲ್ಲಿ ನಡೆದ ಈ ಅನಿರೀಕ್ಷಿತ ಘಟನೆ ಇದೀಗ ಗಮನ ಸೆಳೆದಿದೆ. 


Spread the love

About Laxminews 24x7

Check Also

ತಗಡಿನ ಮನೆಗೆ ಬೆಂಕಿ; ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಗೃಹೋಪಯೋಗಿ ವಸ್ತುಗಳು

Spread the loveಗದಗ: ತಗಡಿನ ಮನೆಗೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ