Breaking News

ತಗಡಿನ ಮನೆಗೆ ಬೆಂಕಿ; ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಗೃಹೋಪಯೋಗಿ ವಸ್ತುಗಳು

Spread the love

ಗದಗ: ತಗಡಿನ ಮನೆಗೆ ಬೆಂಕಿ ಕಾಣಿಸಿಕೊಂಡು ಕ್ಷಣಾರ್ಧದಲ್ಲಿ ಸುಟ್ಟು ಕರಕಲಾದ ಘಟನೆ ಗದಗ ಜಿಲ್ಲೆ ಶಿರಹಟ್ಟಿ ತಾಲೂಕಿನ ಶಿವಾಜಿನಗರ ತಾಂಡಾದಲ್ಲಿ ನಡೆದಿದೆ.

ಸಂತೋಷ ಲಮಾಣಿ ಎಂಬುವರಿಗೆ ಸೇರಿದ ಮನೆ ಬೆಂಕಿಗಾಹುತಿಯಾಗಿದೆ. ಕುಟುಂಬಸ್ಥರೆಲ್ಲರೂ ಎರಡು ದಿನಗಳಿಂದ ಮನೆ ದೇವರಿಗೆ ತೆರಳಿದ್ದರು. ಆದರೆ, ಇಂದು ಬೆಳಗಿನ ಜಾವ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಸ್ಥಳೀಯರು ಬೆಂಕಿ ನಂದಿಸಲು ಮುಂದಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಮನೆ ಸಂಪೂರ್ಣವಾಗಿ ಹೊತ್ತಿ ಉರಿದಿದೆ. ನಂತರ ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಆದರೆ, ಮನೆಯಲ್ಲಿದ್ದ ದವಸ ಧಾನ್ಯಗಳು, ಬಟ್ಟೆ, ಹಣ, ದಾಖಲೆಗಳು ಸೇರಿದಂತೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ.

ಇನ್ನು ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ವಿಷಯ ತಿಳಿದು ಸ್ಥಳಕ್ಕೆ ಬಂದ ಕುಟುಂಬಸ್ಥರು ಸುಟ್ಟು ಕರಕಲಾದ ಮನೆಯನ್ನು ಕಂಡು ಕಣ್ಣೀರಿಟ್ಟಿದ್ದಾರೆ.

ಗದಗ ಜಿಲ್ಲೆಯ ಶಿರಹಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Spread the love

About Laxminews 24x7

Check Also

ಇರಾನ್-ಇಸ್ರೇಲ್-ಅಮೆರಿಕ ಯುದ್ಧದ ಎಫೆಕ್ಟ್; ಬೆಂಗಳೂರಿನಲ್ಲಿ ಡ್ರೈ ಫ್ರೂಟ್ಸ್ ಬೆಲೆ ಗಗನಕ್ಕೆ

Spread the loveಕೆಲ ದೇಶಗಳ ನೌಕಾ ನೆಲೆಗಳು ಇನ್ನೂ ಸಹಜ ಸ್ಥಿತಿಗೆ ಬಂದಿಲ್ಲ. ಇದರ ಎಫೆಕ್ಟ್ ಇದೀಗ ಬೆಂಗಳೂರಿನ ಡ್ರೈ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ