Breaking News

ದೆಹಲಿಯ ಮಾಜಿ ಮುಖ್ಯ ಕಾರ್ಯದರ್ಶಿ ಆತ್ಮಹತ್ಯೆ – ಡೆತ್‌ನೋಟ್ ಪತ್ತೆ!

Spread the love

ನವದಹೆಲಿ: ದೆಹಲಿ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ರಾಕೇಶ್ ಮೆಹ್ತಾ  ಅವರು ನೋಯ್ಡಾದಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ನಿವೃತ್ತ ಐಎಎಸ್ ಅಧಿಕಾರಿ ಮೆಹ್ತಾ ಅವರ ಮೃತದೇಹ ಸೆಕ್ಟರ್ 82 ರಲ್ಲಿರುವ ವಸತಿ ಸಮುಚ್ಚಯದ ಫ್ಲ್ಯಾಟ್‌ನಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಫೇಸ್‌-2 ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಸ್ಥಳ ಪರಿಶೀಲಿಸಿದ ಬಳಿಕ ಮೃತದೇಹವನ್ನ ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ.

ಡೆತ್‌ ನೋಟ್‌ ಪತ್ತೆ
ಇನ್ನೂ ಸ್ಥಳ ಪರಿಶೀಲನೆ ನಡೆಸುತ್ತಿದ್ದ ವೇಳೆ ಘಟನಾ ಸ್ಥಳದಲ್ಲಿ ಡೆತ್‌ನೋಟ್‌ ಪತ್ರವೊಂದು ಪತ್ತೆಯಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಪತ್ರದಲ್ಲಿನ ಸತ್ಯಾಸತ್ಯತೆಗಳನ್ನು ಪರಿಶೀಲಿಸುವುದರ ಜೊತೆಗೆ ಸಾವಿಗೆ ನಿಖರ ಕಾರಣಗಳ ಬಗ್ಗೆಯೂ ತನಿಖೆ ಕೈಗೊಂಡಿದ್ದಾರೆ.

ಯಾರು ಈ ರಾಕೇಶ್ ಮೆಹ್ತಾ?
ರಾಕೇಶ್ ಮೆಹ್ತಾ ಅವರು 2007 ರಿಂದ 2010 ರ ವರೆಗೆ ದೆಹಲಿಯ ಮುಖ್ಯ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಆ ಅವಧಿಯಲ್ಲಿ ಶೀಲಾ ದೀಕ್ಷಿತ್ ಅವರು ದೆಹಲಿ ಮುಖ್ಯಮಂತ್ರಿಯಾಗಿದ್ದರು.

1981ನೇ ಬ್ಯಾಚ್‌ನ ಐಎಎಸ್ ಅಧಿಕಾರಿಯಾಗಿದ್ದ ಮೆಹ್ತಾ ಅವರು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (MCD) ಸೇರಿದಂತೆ ಹಲವು ಪ್ರಮುಖ ಆಡಳಿತಾತ್ಮಕ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ್ದರು. ಮೆಹ್ತಾ ದೆಹಲಿ ಮುಖ್ಯ ಕಾರ್ಯದರ್ಶಿಯಾಗಿದ್ದ ಅವಧಿಯಲ್ಲಿ ನಗರದ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನ ಆಧುನೀಕರಿಸುವ ಪ್ರಯತ್ನಗಳ ಭಾಗವಾಗಿ ಲೋ-ಫ್ಲೋರ್ ಬಸ್‌ಗಳನ್ನ ಪರಿಚಯಿಸಲಾಗಿತ್ತು.


Spread the love

About Laxminews 24x7

Check Also

ಅಂಗನವಾಡಿ ಕಾರ್ಯಕರ್ತೆಯರ ವೇತನ 4,000 ರೂ. ಹೆಚ್ಚಳ – 5 ಲಕ್ಷದವರೆಗೆ ಆರೋಗ್ಯ ಸೇವೆ; ಸಿಎಂ ಯೋಗಿ ಬಂಪರ್‌ ಗಿಫ್ಟ್‌!

Spread the loveಅಯೋಧ್ಯೆ: ಉತ್ತರ ಪ್ರದೇಶದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಬಂಪರ್‌ ಗಿಫ್ಟ್‌ ಕೊಟ್ಟಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ