Breaking News

ಗ್ರಾಪಂನಲ್ಲಿ ಇ-ಸ್ವತ್ತು ಪಡೆಯಲು ಆನ್‌ಲೈನ್ ಅರ್ಜಿ

Spread the love

ಬೆಳಗಾವಿ:ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಆಸ್ತಿಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪಡೆಯುವ ಪ್ರಕ್ರಿಯೆಯನ್ನು ಮತ್ತಷ್ಟು ಸರಳಗೊಳಿಸುವ ನಿಟ್ಟಿನಲ್ಲಿ ಇ-ಸ್ವತ್ತು 2.0 ತಂತ್ರಾಂಶದಡಿ ಸಾರ್ವಜನಿಕರಿಗೆ ಆನ್‌ಲೈನ ಮೂಲಕ ಅರ್ಜಿ ಸಲ್ಲಿಸುವ ಅವಕಾಶ ಕಲ್ಪಿಸಲಾಗಿದೆ ಎಂದು ಜಿಪಂ ಸಿಇಒ ರಾಹುಲ ಶಿಂಧೆ ತಿಳಿಸಿದ್ದಾರೆ.
 ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಇ-ಸ್ವತ್ತು 2.0 ತಂತ್ರಾಂಶದ ಮೂಲಕ ಸಾರ್ವಜನಿಕರಿಂದ ಈವರೆಗೆ ಒಟ್ಟು 3,403 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಪೈಕಿ 2,862 ಅರ್ಜಿಗಳಿಗೆ ಇ-ಸ್ವತ್ತು ವಿತರಿಸಲಾಗಿದೆ. ಉಳಿದ ಅರ್ಜಿಗಳ ವಿಲೇವಾರಿ ಪ್ರಕ್ರಿಯೆಯನ್ನು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳಲ್ಲಿ ಕೈಗೊಳ್ಳಲಾಗುತ್ತಿದೆ.
ಇ-ಸ್ವತ್ತು ಪಡೆಯಲು ಸಾರ್ವಜನಿಕರು ಗ್ರಾಮ ಪಂಚಾಯಿತಿ ಕಚೇರಿಗೆ ಪ್ರತಿಬಾರಿ ಭೇಟಿ ನೀಡುವ ಅಗತ್ಯವನ್ನು ಕಡಿಮೆ ಮಾಡುವ ಉದ್ದೇಶದಿಂದ ವಿವಿಧ ಸೇವಾ ಕೇಂದ್ರಗಳ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸಾರ್ವಜನಿಕರು ತಮ್ಮ ಸಮೀಪದ ಗ್ರಾಮ ಒನ್, ಬಾಪೂಜಿ ಸೇವಾ ಕೇಂದ್ರ ಹಾಗೂ ಕರ್ನಾಟಕ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಇ-ಸ್ವತ್ತು ಪಡೆಯಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.ಇದರೊಂದಿಗೆ, ಸಾರ್ವಜನಿಕರು ತಮ್ಮ ವ್ಯಾಪ್ತಿಯ ಗ್ರಾಪಂ ಕಾರ್ಯಾಲಯಕ್ಕೆ ನೇರವಾಗಿ ಭೇಟಿ ನೀಡಿ ಅಲ್ಲಿಯೇ ಆನ್‌ಲೈನ್ ಅರ್ಜಿ ಸಲ್ಲಿಸುವ ಸೌಲಭ್ಯವನ್ನೂ ಬಳಸಿಕೊಳ್ಳಬಹುದಾಗಿದೆ. ಇ-ಸ್ವತ್ತು ಪಡೆಯಬೇಕಿರುವ ಗ್ರಾಪಂ ವ್ಯಾಪ್ತಿಯ ಆಸ್ತಿ ಮಾಲೀಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ವಿನಂತಿಸಿದ್ದಾರೆ.

Spread the love

About Laxminews 24x7

Check Also

ಅಂಗನವಾಡಿ ಕಾರ್ಯಕರ್ತೆಯರ ವೇತನ 4,000 ರೂ. ಹೆಚ್ಚಳ – 5 ಲಕ್ಷದವರೆಗೆ ಆರೋಗ್ಯ ಸೇವೆ; ಸಿಎಂ ಯೋಗಿ ಬಂಪರ್‌ ಗಿಫ್ಟ್‌!

Spread the loveಅಯೋಧ್ಯೆ: ಉತ್ತರ ಪ್ರದೇಶದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ಬಂಪರ್‌ ಗಿಫ್ಟ್‌ ಕೊಟ್ಟಿದ್ದಾರೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ