ಕಾರವಾರ: ಕರ್ತವ್ಯದಲ್ಲಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಕಚೇರಿಯಲ್ಲೇ ಕುಸಿದುಬಿದ್ದ ಕಾರವಾರ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ ಪಂಡರಿನಾಥ್ ವಿ. ನಾಯ್ಕ (51) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಂಗಳವಾರ ಬೆಳಗ್ಗೆ ಎಂದಿನಂತೆ ಕಚೇರಿಗೆ ಆಗಮಿಸಿದ್ದ ಪಂಡರಿನಾಥ್ ನಾಯ್ಕ ಅವರು ತಮ್ಮ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದರು. ಈ ವೇಳೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಕಚೇರಿಯಲ್ಲೇ ಕುಸಿದುಬಿದ್ದಿದ್ದಾರೆ.
ಘಟನೆ ಗಮನಿಸಿದ ಕಚೇರಿ ಸಿಬ್ಬಂದಿ ತಕ್ಷಣ ನೆರವಿಗೆ ಧಾವಿಸಿ, ತಹಶೀಲ್ದಾರ್ ಅವರ ಜೀಪ್‌ನಲ್ಲಿ ಅವರನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ತುರ್ತು ಚಿಕಿತ್ಸೆ ನೀಡಿದರೂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರದೆ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಪಂಡರಿನಾಥ್ ನಾಯ್ಕ ಮೃತಪಟ್ಟಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ.
ಕರ್ತವ್ಯದಲ್ಲಿದ್ದ ಸಿಬ್ಬಂದಿಯೊಬ್ಬರು ದಿಢೀರ್ ಮೃತಪಟ್ಟ ಸುದ್ದಿ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಹಾಗೂ ಸಹೋದ್ಯೋಗಿಗಳಲ್ಲಿ ಆಘಾತ ಮೂಡಿಸಿದೆ. ಪಂಡರಿನಾಥ್ ನಾಯ್ಕ ಅವರ ಅಕಾಲಿಕ ನಿಧನಕ್ಕೆ ಕಚೇರಿ ಸಿಬ್ಬಂದಿ ಹಾಗೂ ಸಹೋದ್ಯೋಗಿಗಳು ಸಂತಾಪ ಸೂಚಿಸಿದ್ದಾರೆ.
Laxmi News 24×7