Breaking News

ರೀಲ್ಸ್ ವಿಚಾರಕ್ಕೆ ಗಲಾಟೆ; ಬೆಂಗಳೂರಲ್ಲಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ

Spread the love

ಬೆಂಗಳೂರು: ರೀಲ್ಸ್‌ ನೋಡುತ್ತಿದ್ದ ವಿಚಾರಕ್ಕೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಹೆಚ್‌ಎಎಲ್‌ ವಿಭೂತಿಪುರದಲ್ಲಿ ನಡೆದಿದೆ.

ರಾಘವೇಂದ್ರ ಎಂಬಾತ ತನ್ನ ಪತ್ನಿ ಶೃತಿ ಅವರನ್ನು ಕೊಂದು ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ.

ರಾಘವೇಂದ್ರ ಹಾಗೂ ಶೃತಿ ಪ್ರೀತಿಸಿ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮಕ್ಕಳನ್ನು ದಾವಣಗೆರೆಯಲ್ಲಿರುವ ಅಜ್ಜಿ ಮನೆಯಲ್ಲಿ ಇರಿಸಲಾಗಿತ್ತು. ನಿನ್ನೆ ದಂಪತಿ ಇಬ್ಬರೇ ಮನೆಯಲ್ಲಿ ಇದ್ದ ವೇಳೆ ಗಲಾಟೆ ನಡೆದಿದೆ.

ಗಲಾಟೆ ವಿಕೋಪಕ್ಕೆ ತಿರುಗಿ ರಾಘವೇಂದ್ರ ಬಿಯರ್ ಬಾಟಲ್‌ನಿಂದ ಪತ್ನಿಯ ತಲೆಗೆ ಹೊಡೆದು ಕೊಲೆ ಮಾಡಿದ್ದಾನೆ. ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.

ರೀಲ್ಸ್ ವಿಚಾರಕ್ಕೆ ಪದೇ ಪದೇ ಗಲಾಟೆ?
ಶೃತಿ ಯಾವಾಗಲೂ ರೀಲ್ಸ್ ನೋಡುತ್ತಿದ್ದಳು. ಇದೇ ವಿಚಾರಕ್ಕೆ ದಂಪತಿ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು ಎಂದು ತಿಳಿದುಬಂದಿದೆ. ನಿನ್ನೆ ತಡರಾತ್ರಿಯವರೆಗೂ ಶೃತಿ ರೀಲ್ಸ್ ನೋಡುತ್ತಿದ್ದ ವೇಳೆ ಮತ್ತೆ ಗಲಾಟೆ ನಡೆದಿದ್ದು, ಈ ವೇಳೆ ಕೃತ್ಯ ನಡೆದಿದೆ.

ಘಟನೆ ನಿನ್ನೆ ರಾತ್ರಿ ನಡೆದಿದ್ದು, ಮಾಹಿತಿ ತಿಳಿದು ಸ್ಥಳಕ್ಕೆ ಹೆಚ್‌ಎಎಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.


Spread the love

About Laxminews 24x7

Check Also

ಮಹರ್ಷಿ ವಾಲ್ಮೀಕಿ ನಮ್ಮ ಜೀವನಕ್ಕೆ ದಾರಿದೀಪ: ಎನ್. ಬಿ.ಪಾಟೀಲ

Spread the loveಮಹಾಲಿಂಗಪುರ: ರಾಮಾಯಣ ಮಹಾಕಾವ್ಯದ ಮೂಲಕ ಸತ್ಯ, ಧರ್ಮ, ತ್ಯಾಗ, ಕರ್ತವ್ಯ ಮತ್ತು ಮಾನವೀಯ ಮೌಲ್ಯಗಳ ಮಹತ್ವವನ್ನು ಜಗತ್ತಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ